ಬೆಳ್ತಂಗಡಿ : ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಗೆ ಸರ್ಕಾರ ಅಸ್ತು ಎಂದಿದೆ
ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ಕೋರಿ ರಕ್ಷಿತ್ ಶಿವರಾಂ ಅವರು ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರು, ಕಾಶಿಪಟ್ಣ ಪಂಚಾಯತ್ ಅಧ್ಯಕ್ಷ ಸತೀಶ್ ಕೆ ಬಂಗೇರ ಅವರು ಮುತುವರ್ಜಿ ವಹಿಸಿದ್ದರು. ಸಧ್ಯ ಸರಕಾರ ಈ ಶಾಲೆಯಲ್ಲಿ ಆಂಗ್ಲ ಮಾದ್ಯಮ ತರಗತಿ ಪ್ರಾರಂಭಕ್ಕೆ ಅನುಮತಿ ನೀಡಿದೆ.
ಸಕರಾರಿ ಶಾಲೆಯನ್ನು ಉಳಿಸುವ ಉದ್ದೇಶದಿಂದ ಹಾಗು ಸರಕಾರಿ ಶಾಲೆಗೆ ಮಕ್ಕಳನ್ನು ಸೆಳೆಯುವ ನಿಟ್ಟಿನಲ್ಲಿ ಕನ್ನಡ ಮಾದ್ಯಮ ತರಗತಿಗಳ ಜೊತೆಗೆ ಆಂಗ್ಲ ಮಾದ್ಯಮ ತರಗತಿಗಳನ್ನು ಆರಂಭಿಸಲಾಗಿದೆ. ಆರಂಭದಲ್ಲಿ ಸರಕಾರಿ 1000 ಶಾಲೆಗಳಲ್ಲಿ ಇಂತಹ ಯೋಜನೆಯನ್ನು ಜಾರಿ ಮಾಡಿದೆ.