ಬೆಳ್ತಂಗಡಿ: ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ವೈಜಣ್ಣ ವರ್ಗಾವಣೆ: ಹೆಚ್ಚುವರಿ ಪ್ರಭಾರ ಕರ್ತವ್ಯದಲ್ಲಿ ಭವಾನಿಶಂಕರ್ ಎನ್

ಬೆಳ್ತಂಗಡಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ನೀಡಿರುವ ನಿರ್ದೇಶನಗಳನಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ) ಗೆ ಸೇರಿದ ಗ್ರೂಪ್-ಎ(ಹಿರಿಯ ಶ್ರೇಣಿ) ವೃಂದದ ಉಪಕಾರ್ಯದರ್ಶಿ/ಯೋಜನಾ ನಿರ್ದೇಶಕರು ಹಾಗೂ ಗ್ರೂಪ್-ಎ(ಕಿರಿಯ ಶ್ರೇಣಿ) ವೃಂದ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಲಾಗಿದೆ.

ಚುನಾವಣೆ ಪ್ರಕ್ರಿಯೆಯು ಮುಕ್ತಾಯವಾದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಹಿಂದೆ ಹೊಂದಿದ್ದ ಹುದ್ದೆಯ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳತಕ್ಕದ್ದು ಎಂದು ಸೂಚಿಸಲಾಗಿದ್ದು ಬೆಳ್ತಂಗಡಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೈಜಣ್ಣ ಅವರನ್ನು ವರ್ಗಾಯಿಸಿ ಮುಂದಿನ ಆದೇಶದವರೆಗೆ ಬೆಳ್ತಂಗಡಿಗೆ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್ ಅವರನ್ನು ಹೆಚ್ಚುವರಿ ಪ್ರಭಾರದಲ್ಲಿರಿಸಿ ಆದೇಶಿಸಿದೆ.

error: Content is protected !!