ದಲಿತ ಮುಖಂಡ, ಹೋರಾಟಗಾರ ಚಂದು.ಎಲ್. ನಿಧನ:

 

 

 

ಬೆಳ್ತಂಗಡಿ: ದಲಿತ ಮುಖಂಡ, ಹೋರಾಟಗಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ಜೂ 19 ಬುಧವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು , ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಅವರ  ಹುಟ್ಟೂರು ಲಾಯಿಲದಲ್ಲಿ ನಡೆಯಲಿದ್ದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪಡ್ಲಾಡಿ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.ಎಂಬ ಮಾಹಿತಿ ತಿಳಿದು ಬಂದಿದೆ. ಮೃತರು  ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ವರ್ಗದವರನ್ಬು ಅಗಲಿದ್ದಾರೆ.

ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾಗಿ , ಬಳಿಕ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಸದಸ್ಯರಾಗಿ, ಉಪಾಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ ಅವರು 2013 ರಿಂದ 2018 ರ ತನಕ ಕರ್ನಾಟಕ ರಾಜ್ಯ ಸರ್ಕಾರದ ಗೇರು ಅಭಿವೃದ್ಧಿ ನಿಗಮದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಅವರು ಉತ್ತಮ ವಾಗ್ಮಿಯಾಗಿದ್ದರು. ಕೋಮುವಾದಿ ವಿರೋಧಿ ಹೋರಾಟಗಳಲ್ಲೂ ಗುರುತಿಸಿಕೊಂಡಿದ್ದ ಅವರು ಸಂವಿಧಾನ ಸಂರಕ್ಷಣೆಗಾಗಿ ಹಲವಾರು ಹೋರಾಟಗಳ ನೇತೃತ್ವ ವಹಿಸಿದ್ದರು.

error: Content is protected !!