ಸಾಂದರ್ಭಿಕ ಚಿತ್ರ
ನವದೆಹಲಿ: ಉತ್ತರ ಮತ್ತು ಪೂರ್ವ ಭಾರತದಲ್ಲಿ ಸೂರ್ಯನ ಪ್ರಖರತೆಯಿಂದ ಸಾವು ನೋವುಗಳ ಸಂಖ್ಯೆ ಹೆಚ್ಚಾಗುತ್ತಿದೆ. 48 ಗಂಟೆಯಲ್ಲಿ 50 ಕ್ಕೂ ಹೆಚ್ಚು ಸಾವುಗಳಾದ ಬಗ್ಗೆ ವರದಿಯಾಗಿದೆ.
ದೆಹಲಿಯಲ್ಲಿ ಗರಿಷ್ಠ ತಾಪಮಾನ 43.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕಳೆದ 48 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ 50 ಶವಗಳು ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದರೆ ಈ ಸಾವಿನ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ. ತೀವ್ರ ತಾಪಮಾನದಿಂದಾಗಿ ಇಲ್ಲಿನ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ದಾಖಲಾಗಿರುವ 42 ರೋಗಿಗಳು ಸೇರಿದಂತೆ ಒಟ್ಟು 60 ಹೀಟ್‌ಸ್ಟೊçÃಕ್ ಪ್ರಕರಣಗಳು ದಾಖಲಾಗಿವೆ. ಉತ್ತರ ಪ್ರದೇಶ, ದಕ್ಷಿಣ ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ಮತ್ತು ಒಡಿಶಾ, ಜಾರ್ಖಂಡ್, ಬಿಹಾರ ಮತ್ತು ಜಮ್ಮು ವಿಭಾಗದ ಕೆಲವು ಭಾಗಗಳಲ್ಲಿ ಬಿಸಿಗಾಳಿಯಿಂದ ತೀವ್ರ ಸಂಕಷ್ಟದ ಪರಿಸ್ಥಿತಿಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬಿಸಿಲಿನ ತಾಪದಿಂದ ಸಂಕಷ್ಟಕ್ಕೆ ಒಳಗಾಗಿರುವ ನೆರವಿಗೆ ಕೇಂದ್ರ ಸರ್ಕಾರ ಬಂದಿದ್ದು ರೋಗಿಗಳ ರಕ್ಷಣೆ ಹಾಗೂ ನೆರವಿಗೆ ಧಾವಿಸುವಂತೆ ಹಾಗೂ ವಿಶೇಷ ಘಟಕಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರದ ಒಡೆತನದ ಎಲ್ಲ ಆಸ್ಪತ್ರೆಗಳಿಗೆ ಸಲಹೆ ಹಾಗೂ ಸೂಚನೆ ನೀಡಿದೆ.