ಭ್ರೂಣ ಲಿಂಗ ಪತ್ತೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ: ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಗರ್ಭಪೂರ್ವ ಹಾಗೂ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯ್ದೆ (ಪಿಸಿಪಿಎನ್‌ಡಿಟಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಶಸ್ವಿಗೊಂಡ ಗುಪ್ತ ಕಾರ್ಯಾಚರಣೆಯಲ್ಲಿ ಮಾಹಿತಿ ನೀಡಿದವರಿಗೆ 1 ಲಕ್ಷ ರೂ ಬಹುಮಾನ ನೀಡುವುದಾಗಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ಈ ಮೊದಲೇ 50 ಸಾವಿರ ರೂ ಬಹುಮಾನ ನೀಡಲಾಗುತ್ತಿತ್ತು. ಇದನ್ನೇ ಈಗ 1 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಈ ಹಣವನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಮತ್ತು ಇನ್ನುಳಿದ 50 ಸಾವಿರ ರೂ. ಮೊತ್ತವನ್ನು ಆಯಾ ಜಿಲ್ಲೆಗಳಲ್ಲಿ ಸಂಗ್ರಹವಾಗಿರುವ ಪಿಸಿಪಿಎನ್‌ಡಿಟಿ ಶುಲ್ಕದಿಂದ ಭರಿಸಬೇಕು ಎಂದು ತಿಳಿಸಲಾಗಿದೆ.

error: Content is protected !!