ಬೆಂಗಳೂರು: ಆರೋಗ್ಯ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆರೋಗ್ಯ ಇಲಾಖೆಯ ಉಪನಿರ್ದೇಶಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳೊಂದಿಗೆ ಆರೋಗ್ಯ ಸೌಧದಲ್ಲಿ ಇಂದು ನಡೆದ ವಿಸ್ತೃತವಾಗಿ ಸಭೆಯಲ್ಲಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಕಳೆದ ವರ್ಷದ ಅವಧಿಯಲ್ಲಿ ಹಲವು ಬಿಲ್ ಗಳು ಪಾವತಿಯಾಗದೇ ಬಾಕಿ ಇರಿಸಿಕೊಂಡಿರುವ ಬಗ್ಗೆ ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ. ಟೆಂಡರ್ ಪ್ರಕ್ರಿಯೆಗಳನ್ನು ಮಾರ್ಚ್ವರೆಗೆ ಏಕೆ ಎಳೆದುಕೊಂಡು ಹೋಗುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಲಹೆ ಮೇರೆಗೆ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ನೀಡಲಾಗಿದೆ. ಹೀಗಾಗಿ ನಿಮ್ಮ ಕಾರ್ಯದಕ್ಷತೆ ತೋರದಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಯಾವ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಲ್ಲ ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ನಾನು ಹಿಂಜರಿಯಲ್ಲ. ಯಾರ ಮುಲಾಜೂ ನಮಗಿಲ್ಲ. ಯಾರ ಒತ್ತಡದಿಂದಲೂ ನಾನು ಒಬ್ಬ ಅಧಿಕಾರಿಯನ್ನೂ ನೇಮಿಸಿಲ್ಲ ಎಂದು ಎಚ್ಚರಿಕೆ ನೀಡಿದರು.