ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನ: ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಆಚರಣೆ:

 

 

ಬೆಳ್ತಂಗಡಿ: ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ ದಿನವನ್ನು ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಅವರು ಶ್ಯಾಮ್ ಪ್ರಸಾದ್ ಮುಖರ್ಜಿಯವರ ಜೀವನ ಮೌಲ್ಯಗಳನ್ನು ತಿಳಿಸಿದರು. ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅವರು ಮುಖರ್ಜಿಯವರು ಪಕ್ಷಕ್ಕೆ ಕೊಟ್ಟ ಕೊಡುಗೆಯನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲ್,  ವಸಂತಿ ಮಚ್ಚಿನ  ತಾಲೂಕು ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ. ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಪ್ರಭು  ಲಾಯಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ  ಆಶಾ ಸಾಲ್ಡಾನ, ಯುವಮೋರ್ಚಾ ಜಿಲ್ಲಾ ಪ್ರದಾನ ಕಾರ್ಯ ದರ್ಶಿ ಉಮೇಶ್ ಕುಲಾಲ್ ಉಪಸ್ಥಿತರಿದ್ದರು. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಸ್ಮರಣಾರ್ಥ…
ನಗರದ 105 ಬೂತ್ ಅಧ್ಯಕ್ಷ ರ ಮನೆಯಲ್ಲಿ ಸಸಿ ನೆಡಲಾಯಿತು. ಮುಂದೆ 241 ಬೂತ್ ಗಳಲ್ಲಿ 2500 ಸಸಿಗಳನ್ನು ನೆಡುವ ಸಂಕಲ್ಪವನ್ನು ಮಾಡಲಾಯಿತು.
ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿ ಕಾರ್ಯದರ್ಶಿ ಜಯಾನಂದ ಗೌಡ ಧನ್ಯವಾದವಿತ್ತರು.

error: Content is protected !!