ಜಿಲ್ಲೆಯಲ್ಲಿ ಮುಂದುವರಿದ ಮಳೆ, ನಾಳೆಯೂ ಪದವಿ ಪೂರ್ವ ಸೇರಿದಂತೆ ಶಾಲೆಗಳಿಗೆ ರಜೆ:

 

 

ಬೆಳ್ತಂಗಡಿ : ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆ ಹಾಗೂ ಪದವಿಪೂರ್ವ( 12 ನೇ ತರಗತಿ) ಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ.

ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಮಾಹಿತಿ ನೀಡಲಾಗಿದೆ. ದ.ಕ ಜಿಲ್ಲೆಗೆ ಹವಾಮಾನ ಇಲಾಖೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ.

error: Content is protected !!