ಶಿಬಾಜೆ, ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯ ಕ್ಕೆ ಯುವತಿ ಬಲಿ: ಸ್ಥಳದಲ್ಲಿ ಜಮಾಯಿಸಿದ ಜನ, ನ್ಯಾಯಕ್ಕಾಗಿ ಆಗ್ರಹ::

 

 

 

ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್ ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಹಾಗೂ ಕಂಬ ಶಿಫ್ಟ್ ಮಾಡುವಂತೆ ಸಂಬಂಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷ್ಸಿಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ  ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಂಡು ಮನೆಯವರಿಗೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು  ಎಂದು  ಆಗ್ರಹಿಸಿದ್ದಾರೆ. ಘಟನಾ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ಸ್ಥಳಕ್ಕೆ .ಧರ್ಮಸ್ಥಳ ಠಾಣೆಯ ಪೊಲೀಸರು ತೆರಳಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!