ಶಿಬಾಜೆ, ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು:25 ಲಕ್ಷ ಪರಿಹಾರ ನೀಡುವಂತೆ ಶಾಸಕ ಹರೀಶ್ ಪೂಂಜ ಆಗ್ರಹ:

 

 

 

ಬೆಳ್ತಂಗಡಿ: ಶಿಬಾಜೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ ಯುವತಿಯ ಮನೆಯವರಿಗೆ ಪರಿಹಾರ ನೀಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಗ್ರಹಿಸಿದ್ದಾರೆ.ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿದ ಅವರು ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದರು. ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಮಳೆಗಾಲದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಇಲಾಖೆಗೆ ಈ ವೇಳೆ ಶಾಸಕರು ಸೂಚಿಸಿದರು.

error: Content is protected !!