ಹಾವೇರಿ, ಬೆಳ್ಳಂಬೆಳಗೆ ಭೀಕರ ರಸ್ತೆ ಅಪಘಾತ: ಲಾರಿಗೆ ಟೆಂಪೋ ಟ್ರಾವೆಲ್ಲರ್ ಡಿಕ್ಕಿ,13 ಮಂದಿ ಸಾವು:

 

 

 

 

ಹಾವೇರಿ:ಲಾರಿಯೊಂದಕ್ಕೆ ವೇಗವಾಗಿ ಬಂದ ಟೆಂಪೋ ಟ್ರಾವೆಲ್ಲರ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಟಿಟಿಯಲ್ಲಿದ್ದ 13 ಜನರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್​ನಲ್ಲಿ ಇಂದು ಬೆಳ್ಳಂಬೆಳಗೆ ನಡೆದಿದೆ. ಸವದತ್ತಿ ದೇವಸ್ಥಾನಕ್ಕೆ  ತೆರಳಿ  ಊರಿಗೆ ಹಿಂತಿರುಗಿ ಬರುವಾಗ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಓರ್ವ ಬಾಲಕ ಗಾಯಗೊಂಡಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  ಮೃತರೆಲ್ಲರೂ ಶಿವಮೊಗ್ಗ ಮೂಲದ ನಿವಾಸಿಗಳು ಎಂಬ ಮಾಹಿತಿ ತಿಳಿದು ಬಂದಿದೆ. ನಸುಕಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!