ಉಡುಪಿ: 32 ವರ್ಷಗಳಿಂದ ದುರ್ಮಾಂಸ ಗಡ್ಡೆಯಿಂದ ಬಳಲುತ್ತಿದ್ದ ವೃದ್ಧೆಗೆ ಉಡುಪಿ ಜಿಲ್ಲಾಸ್ಪತ್ರೆಯ ವೈದ್ಯರು ಮುಕ್ತಿ ನೀಡಿದ್ದಾರೆ.
ಕಾರ್ಕಳದ ನಿವಾಸಿ 71 ವರ್ಷದ ಪುಷ್ಪಾ (71) ಎಂಬವರ ಬಲಭುಜದಿಂದ ಸುಮಾರು 8 ಕೆಜಿ ದುರ್ಮಾಂಸದ ಗಡ್ಡೆಯನ್ನು ಬೇರ್ಪಡಿಸುವಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞರು ಯಶಸ್ವಿಯಾಗಿದ್ದಾರೆ.
ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಶಸ್ತ್ರಚಿಕಿತ್ಸಾ ತಜ್ಞ ಡಾ. ಸುಜಿತ್ ಅವರು ತಮ್ಮ ತಂಡದೊಂದಿಗೆ ಸುಮಾರು 3 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಈ ಗಡ್ಡೆಯನ್ನು ಹೊರತೆಗೆದಿದ್ದಾರೆ. ಆಸ್ಪತ್ರೆಯ ಜನರಲ್ ಸರ್ಜನ್ ಆಗಿರುವ ಡಾ. ಸುಜಿತ್ ಅವರ ನೇತೃತ್ವದಲ್ಲಿ ಅರವಳಿಕೆ ತಜ್ಞರಾದ ಡಾ. ಉಮೇಶ್ ಉಪಾಧ್ಯಾಯ ಹಾಗೂ ಡಾ. ವಿಶ್ವನಾಥ್ ಶೆಟ್ಟಿ ಹಾಗೂ ನುರಿತ ಶುಶ್ರೂಷಕ ಅಧಿಕಾರಿಗಳು ಸಹಕರಿಸಿದರು.
ಸದ್ಯ ಮಹಿಳೆ ಆರೋಗ್ಯವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.