ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಸರಕಾರಿ ಬಸ್ ಚರಂಡಿಗೆ..!: ಅಪಾಯದಿಂದ ಪ್ರಯಾಣಿಕರು ಪಾರು

ಬೆಳ್ತಂಗಡಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಜು.3ರಂದು ಉಜಿರೆಯ ನೀರಚಿಲುಮೆ ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಹೂ ಹಡಗಲಿಗೆ ಹೊರಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಕನ್ಯಾಡಿ ಕಳೆದು ನೀರಚಿಲುಮೆ ಬಳಿ ಬರುತ್ತಿದ್ದಂತೆ ಎದುರಿನಿಂದ ಬೈಕ್ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋದ ಸರಕಾರಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ಸನು ಚರಂಡಿಗೆ ಇಳಿಸಿದ್ದಾರೆ.

ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

error: Content is protected !!