ವಿಷ ಪದಾರ್ಥ ಸೇವಿಸಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ:

 

 

 

 

 

 

ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಭಂಡಾರಿ ಮತ್ತು ಸುಮಿತ್ರಾ ದಂಪತಿಗಳ ಪುತ್ರಿ ಅನಿತಾ (17) ಎಂಬವರು ಕಳೆದ ನಾಲ್ಕು ದಿನದ ಹಿಂದೆ ಎರಡು ಪ್ಯಾಕ್ ಇಲಿ ಪಾಷಣ ಸೇವಿಸಿ ತೀವ್ರ ಅಸ್ಪಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 4 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಈಕೆ ಪ್ರಸ್ತುತ ಬೆಳ್ತಂಗಡಿಯ ಖಾಸಗಿ ಕಾಲೆಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದು ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಡೆತ್ ನೋಟ್ ಬರೆದಿಟ್ಟುರುವುದಾಗಿ ತಿಳಿದುಬಂದಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

*ಗೆಳತಿಯ ಹಾದಿಯನ್ನೇ ಹಿಡಿದ ಅನಿತಾ:*
ಈಕೆಯ ಗೆಳತಿ ಕಳೆದ ಆರು ತಿಂಗಳ ಹಿಂದೆ ಧರ್ಮಸ್ಥಳ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಶಾಲೆಯ ಇಬ್ಬರು ಶಿಕ್ಷಕರಿಂದ ಅವಮಾನ ಅಗಿದ್ದರಿಂದ ತೃಷಾ (16) ಎಂಬಾಕೆ ಇಲಿಪಾಷಣ ತಿಂದು ಸಾವನ್ನಪ್ಪಿದ್ದಳು.ಈ ಪ್ರಕರಣದಲ್ಲಿ ಇಬ್ಬರು ಶಿಕ್ಷಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದರು. ಒಂದೇ ಗ್ರಾಮದ ಇಬ್ಬರು ಸ್ನೇಹಿತರಾಗಿದ್ದು. ಆಕೆಯ ಸಾವಿನ ಬಳಿಕ ಅನಿತಾ ಕೂಡಾ ಮಾನಸಿಕವಾಗಿ ಕುಗ್ಗಿದ್ದಳು ಎಂದು ಆಕೆಯನ್ನು ಬಲ್ಲವರು ತಿಳಿಸಿದ್ದು, ಆತ್ಮೀಯ ಗೆಳತಿ ಶಾಲೆಗೆ ಒಟ್ಟಿಗೆ ಹೋಗುತ್ತಿದ್ದ ತೃಷಾ ಸಾವಿನಿಂದ ಮಾನಸಿಕವಾಗಿ ಅನಿತಾ ನೊಂದು ಈ ರೀತಿ ಮಾಡಿಕೊಂಡಿರುವ ಬಗ್ಗೆಯೂ ಪ್ರಶ್ನೆ ಮೂಡುತ್ತದೆ.

error: Content is protected !!