ಬೆಂಗಳೂರು: ರೇಣುಕಾ ಸ್ವಾಮಿ ಅವರನ್ನು ಹೀನಾಯವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು (ಜು.04) ನ್ಯಾಯಾಂಗ ಬಂಧನ ಪೂರ್ಣಗೊಂಡಿದ್ದು ಆದಾಗ್ಯೂ ದರ್ಶನ್ ಮತ್ತು ಗ್ಯಾಂಗ್‌ನ್ನು ಇಂದು ಕೋರ್ಟ್‍ಗೆ ಹಾಜರುಪಡಿಸುತ್ತಿಲ್ಲ. ಅದಕ್ಕೆ ಕಾರಣ ಇಲ್ಲಿದೆ.
ಪ್ರಕರಣದಲ್ಲಿ ದರ್ಶನ್ ಅವರನ್ನು ತೀವ್ರವಾಗಿ ವಿಚಾರಣೆ ಮಾಡಲಾಗಿತ್ತು. ಆ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇಂದು ಅವರು ಜೈಲಿನಿಂದ ಹೊರ ಬರುತ್ತಾರೋ ಅಥವಾ ಜೈಲಿನಲ್ಲಿ ಉಳಿಯುತ್ತಾರೋ ಎಂಬುದು ತಿಳಿಯಲಿದೆ. ಸದ್ಯ ಅವರು ನ್ಯಾಯಾಲಯಕ್ಕೆ ಹಾಜರಾಗದೆ ಇರಲು ಒಂದು ಕಾರಣ ಇದೆ.
ನಟ ದರ್ಶನ್‌ಗೆ ಮೊದಲೆ ಸಾವಿರಾರು ಅಭಿಮಾನಿಗಳಿದ್ದು ಅವರನ್ನು ಕೋರ್ಟ್ ಎದುರು ಹಾಜರುಪಡಿಸುವಾಗ ಫ್ಯಾನ್ಸ್ ನೆರೆಯುತ್ತಿದ್ದಾರೆ, ಮಾಧ್ಯಮದವರು ಮುತ್ತಿಕೊಳ್ಳುತ್ತಿದ್ದಾರೆ. ಈ ತೊಂದರೆಯೇ ಬೇಡ ಎಂಬ ಕಾರಣಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಅವರ ವಿಚಾರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಪವಿತ್ರಾ ಗೌಡ ಪರ ವಕೀಲರು ಮಾಹಿತಿ ನೀಡಿದ್ದು ‘ಇಂದು ವಿಚಾರಣೆಗೆ ನ್ಯಾಯಾಲಯಕ್ಕೆ ಆರೋಪಿಗಳು ಹಾಜರಾಗುವುದಿಲ್ಲ. ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ. ಈ ಪ್ರಕರಣದಲ್ಲಿ ಸದ್ಯ ತನಿಖೆ ನಡೆಯುತ್ತಿದೆ. ದರ್ಶನ್ ಅವರು ಪ್ರಭಾವಿ ವ್ಯಕ್ತಿ. ಅವರು ಹೊರ ಬಂದರೆ ಸಾಕ್ಷಿ ನಾಶ ಆಗಬಹುದು. ಹೀಗಾಗಿ, ಅವರಿಗೆ ಜಾಮೀನು ಸಿಗೋದು ಅನುಮಾನ ಎಂದು ಹೇಳಲಾಗುತ್ತಿದೆ.