ಮೈಸೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿದ್ದು ಆರೋಗ್ಯಾಧಿಕಾರಿಯೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ಹುಣಸೂರು ತಾಲೂಕಿನಲ್ಲಿ ಸಂಭವಿಸಿದೆ.
ಹುಣಸೂರು ತಾಲೂಕಿನಲ್ಲಿ ಸಮುದಾಯ ಆರೋಗ್ಯಾಧಿಕಾರಿ 35 ವರ್ಷದ ನಾಗೇಂದ್ರ ಅವರು ಗುರುಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಡೆಂಗ್ಯೂ ಸೋಂಕಿನಿಂದ ಬಳಲುತ್ತಿದ್ದ ಇವರು ಜು.01ರಂದು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ.
ಮೈಸೂರು ಜಿಲ್ಲೆಯಲ್ಲಿ ಸದ್ಯಕ್ಕೆ 479 ಡೆಂಗ್ಯೂ ಸಕ್ರಿಯ ಪ್ರಕರಣಗಳು ಇವೆ. ಈಗಾಗಲೇ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಪ್ರತಿಯೊಂದು ತಾಲೂಕಿನಲ್ಲೂ ಜನ ಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸವನ್ನ ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಮಾಡುತ್ತಿದ್ದಾರೆ.