ಕೋಣಗಳ ಮಧ್ಯೆ ಕೊಟ್ಟಿಗೆಯಲ್ಲಿ ಕುಳಿತಿರೋ ಡೈನಾಮಿಕ್ ಪ್ರಿನ್ಸ್: ‘ಕರಾವಳಿ’ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್: ಕರಾವಳಿಗರ ದಿಲ್‌ಖುಷ್..!?


ಕನ್ನಡ ಚಿತ್ರರಂಗದಲ್ಲಿ ಭಾರೀ ಸದ್ದು ಮಾಡುತ್ತಿರುವ ‘ಕರಾವಳಿ’ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸುತ್ತಿರುವುದಲ್ಲದೆ, ಕರಾವಳಿಗೆ ಬಹಳ ಹತ್ತಿರವಾಗುವ ಸಿನಿಮಾ ಎಂಬ ಭಾವನೆ ಹುಟ್ಟುಹಾಕುತ್ತಿದೆ.

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಹುಟ್ಟುಹಬ್ಬಕ್ಕೆ ಶುಭಕೋರಿ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿರುವ ಚಿತ್ರ ತಂಡ ಈ ಸಿನಿಮಾಜ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
ನಿರ್ದೇಶಕ ಗುರುದತ್ ಗಾಣಿಗ ಸಾರಥ್ಯದಲ್ಲಿ ಮೂಡಿ ಬರುತ್ತಿದೆ. ‘ಕರಾವಳಿ’ ಈಗಾಗಲೇ ರೋಮಾಂಚನಗೊಳಿಸುವ ಫಸ್ಟ್ ಲುಕ್, ಪೋಸ್ಟರ್, ಮತ್ತು ಯೂಟ್ಯೂಬ್ ನಲ್ಲಿ ಪ್ರೋಮೋ ಅನಾವರಣಗೊಳಿಸಿದೆ. ಈಗ ಮತ್ತೊಂದು ಲುಕ್ ಕಥೆ ಸುತ್ತಲಿನ ಕುತೂಹಲವನ್ನು ಹೆಚ್ಚಿಸಿದೆ.

ಈವರೆಗೆ ಪೋಸ್ಟರ್ ನಲ್ಲಿ ವಿಭಿನ್ನ ಅವತಾರಗಳಲ್ಲಿ ಕಾಣಿಸಿಕೊಂಡಿರುವ ಪ್ರಜ್ವಲ್ ದೇವರಾಜ್‌ಈ ಸಿನಿಮಾದಲ್ಲಿ ಯಾವ ಪಾತ್ರ ನಿರ್ವಹಿಸುತ್ತಿದ್ದಾರೆ ಅನ್ನೋದೇ ನೋಡುಗರ ಕುತೂಹಲ. ಯಕ್ಷಗಾನ, ಕಂಬಳ, ಮಹಿಷಾಸುರ ಹೀಗೆ ವಿಭಿನ್ನ ಗೆಟಪ್‌ನಲ್ಲಿ ಪ್ರಜ್ವಲ್ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಈ ಸಿನಿಮಾದಲ್ಲಿ ಪ್ರಜ್ವಲ್ ಯಕ್ಷಗಾನ ಕಲಾವಿದನಾ ಅಥವಾ ಕಂಬಳ ಪಟುವಾ? ಎಂಬ ಕುತೂಹಲ ಹೆಚ್ಚಾಗಿಸಿದೆ.

ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆಗಿರುವ ಪೋಸ್ಟರ್‌ನಲ್ಲಿ ಪ್ರಜ್ವಲ್ ಕೋಣಗಳ ಮಧ್ಯೆ ಕೊಟ್ಟಿಗೆಯಲ್ಲಿ ಕುಳಿತಿದ್ದಾರೆ. ಗಂಭೀರ ನೋಟ ಬೀರುತ್ತಾ, ಕುಳಿತಿರುವ ಪ್ರಜ್ವಲ್ ಅವರ ಸಿಂಪಲ್ ವ್ಯಕ್ತಿತ್ವದ ಲುಕ್ ಆಕರ್ಷಕವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಂಡಿರುವ ಗುರುದತ್ ಗಾಣಿಗ, ‘ಹುಟ್ಟುಹಬ್ಬದ ಶುಭಾಶಯಗಳು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್’ ಎಂದು ಬರೆದುಕೊಂಡಿದ್ದಾರೆ.

ಈ ಸಿನಿಮಾ ದಲ್ಲಿ ನಾಯಕ ನಟನಾಗಿ ಪ್ರಜ್ವಲ್ ದೇವರಾಜ್ ಹಾಗೂ ನಾಯಕಿಯಾಗಿ ನಟಿ ಸಂಪದಾ ಕಾಣಿಸಿಕೊಳ್ಳಲಿದ್ದು, ಬಹುತೇಕ ಸಿನಿಮಾ ಕರಾವಳಿಯ ಸುತ್ತಮುತ್ತವೇ ಚಿತ್ರೀಕರಣಗೊಂಡಿದೆ.

error: Content is protected !!