ಜು.06: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: ವಿಶೇಷ ಆಹ್ವಾನಿತರಾಗಿ ಇಸ್ರೋ ಹಿರಿಯ ವಿಜ್ಞಾನಿ ಪಿ.ವಾಸುದೇವ ರಾವ್: ಎಸ್.ಎಸ್.ಎಲ್.ಸಿ. ಸಾಧಕರಿಗೆ ಸನ್ಮಾನ : ದಿತಿ ಸಾಂತ್ವನ ನಿಧಿ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಜು.06 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಲಿದ್ದು, ಇಸ್ರೋ ಬೆಂಗಳೂರು ಇದರ ಹಿರಿಯ ವಿಜ್ಞಾನಿ ಪಿ.ವಾಸುದೇವ ರಾವ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಸುಧಾ ವಾರಪತ್ರಿಕೆಯ ಮುಖ್ಯ ಉಪ ಸಂಪಾದಕಿ ಉಮಾ ಅನಂತ್ ಉಪನ್ಯಾಸ ನೀಡಲಿದ್ದು, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅಥಿತಿಗಳಾಗಿ ಭಾಗವಹಿಸಲಿದ್ದಾರೆ.

ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಪೈಕಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲ್ಲೂಕಿಗೆ ಅತಿ ಹೆಚ್ಚು ಅಂಕ ಪಡೆದ ಕಲ್ಮಂಜ ಸರ್ಕಾರಿ ಪ್ರೌಢ ಶಾಲೆಯ ತನುಶ್ರೀ, ಕಾಯರ್ತಡ್ಕ ಸರ್ಕಾರಿ ಪ್ರೌಢ ಶಾಲೆಯ ಮೇಘನಾ ಹಾಗೂ ಮಚ್ಚಿನ ಸರ್ಕಾರಿ ಪ್ರೌಢ ಶಾಲೆಯ ಮಹಮ್ಮದ್ ಜಿಯಾದ್ ಇವರಿಗೆ ಗೌರವಾರ್ಪಣೆ, ಪತ್ರಕರ್ತ ಮನೋಹರ್ ಬಳಂಜ ಹಾಗೂ ಲಿಖಿತ ದಂಪತಿ ವತಿಯಿಂದ ಅನಾರೋಗ್ಯಪೀಡಿತ ಮಕ್ಕಳ ಚಿಕಿತ್ಸೆಗಾಗಿ ಅರ್ಹ 6 ಮಂದಿಗೆ ದಿತಿ ಸಾಂತ್ವನ ನಿಧಿ ವಿತರಣೆ ನಡೆಯಲಿದೆ.

error: Content is protected !!