ಶಾಸಕರ 2 ಪ್ರಕರಣ ರದ್ದು ಕೋರಿ ಅರ್ಜಿ: ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಜಾ: ಮಧ್ಯೆ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ: ಹರೀಶ್ ಪೂಂಜ ಸೇರಿದಂತೆ ಬೆಂಬಲಿಗರ ವಿಚಾರಣೆಗೆ ವಿನಾಯಿತಿ:

 

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ಅವರ ಮೇಲಿದ್ದ ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯು ಇಂದು (ಜೂ.05) ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ವಜಾಗೊಳಿಸಿದೆ.

ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಮತ್ತು ಅನುಮತಿ ಪಡೆಯದೇ ಮಾಡಿದ ಪ್ರತಿಭಟನೆಯ ಪ್ರಕರಣದ ಬಗ್ಗೆ ರದ್ದು ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಅರ್ಜಿ ಸಲ್ಲಿಸಿದ್ದು ಇಂದು ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಾಲಯ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾ ಮಾಡಿದೆ.
ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

 

 

ಶಾಸಕ ಹರೀಶ್ ಪೂಂಜ ಸೇರಿದಂತೆ ಆರೋಪಿತ ಬೆಂಬಲಿಗರ ವಿಚಾರಣೆಗೆ   ವಿನಾಯಿತಿ;

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಬೆಂಬಲಿಗರ ಮೇಲೆ ವಿವಿಧ ಸಂದರ್ಭದಲ್ಲಿ ದಾಖಲಾಗಿದ್ದ  ಪ್ರಕರಣಗಳ ಆರೋಪಿತರಿಗೆ ವಿಚಾರಣಾ ನ್ಯಾಯಾಲಯಕ್ಕೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ನ್ಯಾಯಾಲಯ ಆದೇಶಿಸಿದೆ. ನ್ಯಾಯವಾದಿ ಶುಶಾಲ್ ತಿವಾರಿ ಮೂಲಕ ಆರೋಪಿತರು ಸಲ್ಲಿಸಿದ್ದ ಅರ್ಜಿಗೆ ನ್ಯಾಯವಾದಿ ಪ್ರಸನ್ನ ದೇಶಪಾಂಡೆ,ಹಾಗೂ ಹಿರಿಯ ನ್ಯಾಯವಾದಿ ಪ್ರಭುಲಿಂಗ ನಾವಡಗಿ ವಾದವನ್ನು ಆಲಿಸಿದ ನ್ಯಾಯಮೂರ್ತಿ ಶ್ರೀಕೃಷ್ಣ ದೀಕ್ಷಿತ್ ಏಕ ಸದಸ್ಯ  ಪೀಠ ಆದೇಶಿಸಿದೆ.

 

 

 

error: Content is protected !!