ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೂರೂ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 48 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೂ ಅಲ್ಲಿನ ಭಾಗಗಳಿಗೆ ಜುಲೈ 7 ರಿಂದ 9 ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರಿಗೆ ಮತ್ತು ಶಿವಮೊಗ್ಗಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಕೊಡಲಾಗಿದೆ. ಜುಲೈ 7 ರಿಂದ 9 ರವರೆಗೆ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗವು 30 ರಿಂದ 40 ಕಿಲೋಮೀಟರ್ ಪ್ರತಿ ಘಂಟೆಗೆ ಇರಲಿದ್ದು, ಅಲ್ಲಿಯೂ ಭಾರಿ ಮಳೆ ಸಂಭವಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ನೀಡಿದೆ.