ದ.ಕ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ದಿಬ್ಬಗಳು ಕುಸಿದು, ಕೆಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಈ ಮಧ್ಯೆ ಅಪಾಯಕಾರಿ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವೇಶ ನಿರ್ಬಂಧಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈಮುಹಿಲನ್ ಆದೇಶ ಹೊರಡಿಸಿದ್ದಾರೆ.
ಮುಂದಿನ ಆದೇಶದವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇರುವ ಜಲಪಾತ, ಝರಿ, ನದಿ ಸಮುದ್ರ, ಜಲಾಶಯ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು, ನೀರಿಗೆ ಇಳಿಯುವುದು, ಈಜುವುದು, ಸಾಹಸ ಚಟುವಟಿಕೆ ನಡೆಸುವುದನ್ನು ನಿರ್ಬಂಧಿಸಲಾಗಿದೆ ಎಂದಿದ್ದಾರೆ.
ಇತ್ತೀಚೆಗೆ ಕೆಲವು ಕಡೆ ಈಜಲು ತೆರಳಿದವರು, ಮೀನು ಹಿಡಿಯುವ ವೇಳೆ, ನೀರಿನಲ್ಲಿ ಮೋಜು ಮಸ್ತಿ ಮಾಡುವ ಸಂದರ್ಭದಲ್ಲಿ ಪ್ರಾಣಕಳೆದುಕೊಂಡ ಘಟನೆಗಳು ನಡೆದಿದ್ದು ಇಂತಹ ಘಟನೆಗಳು ಮರುಕಳಿಸಬಾರದೆಂಬ ಹಿತದೃಷ್ಠಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.