ಅಸಮರ್ಪಕ ಕಾಮಗಾರಿಗೆ ಇಂಜಿನಿಯರ್ ನೇರ ಹೊಣೆ: ಅವ್ಯವಸ್ಥಿತ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರು ಕಪ್ಪು ಪಟ್ಟಿಗೆ: ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಮಂಗಳೂರು: ರಾಷ್ಟೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಸವಾರರಿಗೆ ತೊಂದರೆಯಾದರೆ ಇಂಜಿನಿಯರ್‌ರನ್ನು ನೇರ ಹೊಣೆ ಮಾಡಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಅವರು ಮಂಗಳೂರಿನ ಜಿ ಪಂ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೆ ಡಿ ಪಿ ಸಭೆಯಲ್ಲಿ ಜಿಲ್ಲಾ ಕೆ ಡಿ ಪಿ ಸದಸ್ಯರಾದ ಸಂತೋಷ್ ಕುಮಾರ್, ಲಾಯಿಲರವರು ಸಾರ್ವಜನಿಕರ ಪರವಾಗಿ ಎತ್ತಿದ ಪ್ರಶ್ನೆಗೆ ಉತ್ತರಿಸಿ ಈರೀತಿ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು – ಚಾರ್ಮಾಡಿ ರಾಷ್ಟೀಯ ಹೆದ್ದಾರಿಯ ಅಸಮರ್ಪಕ ಕಾಮಗಾರಿ ಯಿಂದಾಗಿ ಸವಾರರಿಗೆ ಅಥವಾ ಸಾರ್ವಜನಿಕರಿಗೆ ತೊಂದರೆಯಾದರೆ ಸಂಬAಧ ಪಟ್ಟ ಇಂಜಿನಿಯರ್ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.


ಬೆಳಾಲು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಅಸಮರ್ಪಕ ಕಾಮಗಾರಿ ಬಗ್ಗೆ ಎತ್ತಿದ ಪ್ರಶ್ನೆಗೆ ತಕ್ಷಣ ಸಂಬAಧಪಟ್ಟ ಇಲಾಖೆಯ ಜಿಲ್ಲಾ ಇಂಜಿನಿಯರ್‌ರವರನ್ನು ಕರೆಸಿದ ಉಸ್ತುವಾರಿ ಸಚಿವರು ಸರಿಯಾಗಿ ಕಾಮಗಾರಿ ನಿರ್ವಹಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸೂಚಿಸಿದರು.

error: Content is protected !!