ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಕೆ.ಎಸ್.ಆರ್.ಪಿ ಪಡೆಯ ಪೊಲೀಸ್ ಇನ್ಸ್ಪೆಕ್ಟರ್ ಬಿದಿದ್ದಾರೆ.
ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆ 7ನೇ ಬೆಟಾಲಿಯನ್, ಕೊಣಾಜೆ, ಮಂಗಳೂರು ಇಲ್ಲಿ ಮೀಸಲು ಪೊಲೀಸ್ ಕಾನ್ಸ್‌ಸ್ಟೇಬಲ್ ಒಬ್ಬರು
ಪೊಲೀಸ್ ಅತಿಥಿಗೃಹದ ನಿರ್ವಾಹಕರಾಗಿ ಕರ್ತವ್ಯವನ್ನು ನಿರ್ವಹಿಸುವ ಸಮಯದಲ್ಲಿ
ಇಲ್ಲಿನ ಪೊಲೀಸ್ ನಿರೀಕ್ಷಕ ಮಹಮ್ಮದ್ ಆರೀಸ್ ಕರ್ತವ್ಯ ನಿರ್ವಹಿಸಬೇಕಾದರೆ ತನಗೆ 20,000/- ರೂ ಗಳನ್ನು ನೀಡಬೇಕೆಂದು ಹಾಗೂ ಪ್ರತಿ ತಿಂಗಳು ತನಗೆ ರೂ 6,000/-ದಂತೆ ಹಣ ನೀಡಬೇಕೆಂದು ಕಾನ್ಸ್ ಸ್ಟೇಬಲ್ ಅವರಲ್ಲಿ ಬೇಡಿಕೆಯನ್ನು ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ , ಅಧಿಕಾರಿಗೆ ಪ್ರತಿ ತಿಂಗಳು ರೂ. 6,000/- ವನ್ನು ಲಂಚವಾಗಿ ನೀಡುತ್ತಾ ಬಂದಿದ್ದು, ಈವರೆಗೆ ಒಟ್ಟು 50,000/- ರೂಗಳನ್ನು ಪೊಲೀಸ್ ನಿರೀಕ್ಷಕ ಮಹಮ್ಮದ್ ಆರೀಸ್ ಪಡೆದುಕೊಂಡಿದ್ದರು , ಅದರೆ ಕಾನ್ಸ್ ಸ್ಟೇಬಲ್ ತಂದೆಯ ಅನಾರೋಗ್ಯದ ಕಾರಣ 2024ರ ಎಪ್ರಿಲ್ ತಿಂಗಳಿನಿಂದ ಜೂನ್ ತಿಂಗಳವರೆಗಿನ 3 ತಿಂಗಳ ಬಾಬ್ತು ರೂ 18,000/- ಲಂಚವಾಗಿ ಕೊಡಬೇಕಾದ ಹಣವನ್ನು ಪೊಲೀಸ್ ನಿರೀಕ್ಷಕ ಮಹಮ್ಮದ್ ಆರೀಸ್‌ರವರಿಗೆ ಕೊಡಲು ಸಾಧ್ವವಾಗದೇ ಇದ್ದಾಗ 3 ತಿಂಗಳ ಬಾಕಿ ರೂ 18,000/- ಹಣವನ್ನು ನೀಡಿಲ್ಲ ಎಂಬುದಾಗಿ ಪ್ರತಿ ದಿನಾಲೂ ಕರೆ ಮಾಡಿ ನೀಡಲು ಬಾಕಿ ಇರುವುದನ್ನು ನೀಡು, ಇಲ್ಲವಾದರೆ ಡ್ಯೂಟಿ ಬದಲಾಯಿಸುತ್ತೇನೆ ಎಂಬುದಾಗಿ ತಿಳಿಸಿದ್ದರು. ಈ ಹಣವನ್ನು ಅರೀಸ್ ಅವರು ಕಾನ್ಸ್ ಸ್ಟೇಬಲ್ ಅವರಿಂದ ಜು10 ರಂದು ಸಂಜೆ ಸ್ವೀಕರಿಸುತ್ತಿರುವ ವೇಳೆ
ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಇನ್ನು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು ಬಳಿಕ ಮಂಗಳೂರು ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸರು ಹಾಜರುಪಡಿಸಲಿದ್ದಾರೆ.ದಾಳಿಯ ವೇಳೆ
ಮಂಗಳೂರು ಲೋಕಾಯುಕ್ತ ಎಸ್ಪಿ ಎಂ.ಎ.ನಟರಾಜ ನೇತೃತ್ವದಲ್ಲಿ ಡಿವೈಎಸ್ಪಿ ಡಾ.ಗಾನಾ ಪಿ ಕುಮಾರ್ , ಡಿವೈಎಸ್ಪಿ ಚೆಲುವರಾಜ್, ಇನ್ಸ್ಪೆಕ್ಟರ್ ಗಳಾದ ಅಮಾನುಲ್ಲಾ.ಎ, ಶ್ರೀ ಸುರೇಶ್ ಕುಮಾರ್,
ಶ್ರೀ ಚಂದ್ರಶೇಖರ್ ಸಿ.ಎಲ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.