ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿರುವ ಸಿಬ್ಬಂದಿಗಳ ಕೊರತೆಯಿಂದ ದಿನನಿತ್ಯ ಜನರು ತೊಂದರೆಗೊಳಗಾಗುತ್ತಿರುವ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ನೀಡಿದ್ದಾರೆ.
ಬೆಳ್ತಂಗಡಿ ತಾಲೂಕು ಕಚೇರಿಗೆ 97 ಹುದ್ದೆಗಳು ಮಂಜೂರಾತಿ ಆಗಿದ್ದು 55 ಹುದ್ದೆಗಳು ಭರ್ತಿಯಾಗಿದೆ. ಆದರೆ 42 ಹುದ್ದೆಗಳು ಖಾಲಿ ಇದೆ. 8 ಜನ ನಿಯೋಜನೆ ಮೇರೆಗೆ ಬೇರೆ ತಾಲೂಕು, ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ತಾಲೂಕು ಆಡಳಿತ ಕಚೇರಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬಿದರೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ಮನವಿ ಮೂಲಕ ತಿಳಿಸಿದ್ದಾರೆ.