ಇಷ್ಟಾರ್ಥ ನೆರವೇರಿಸಿದ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ: ಟೀಂ ಇಂಡಿಯಾ ತಂಡದ ಥ್ರೋಡೌನ್ ಪರಿಣತ ರಾಘವೇಂದ್ರ ಸುಬ್ರಹ್ಮಣ್ಯಕ್ಕೆ ಭೇಟಿ: ಶ್ರೀ ದೇವರಿಗೆ ವಿಶೇಷ ಪೂಜೆ : ಏನದು ಹರಕೆ..?

ಸುಬ್ರಹ್ಮಣ್ಯ: ಭಾರತ ಕ್ರಿಕೆಟ್ ತಂಡ ಇತ್ತೀಚೆಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಬೆನ್ನಲ್ಲೆ ತಂಡದ ಆಟಗಾರ ಸೂರ್ಯಕುಮಾರ್ ಯಾದವ್ ಅವರು ಜು.09ರಂದು ಉಡುಪಿ ಜಿಲ್ಲೆಯ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇದೀಗ ಅದೇ ತಂಡದ ಮತ್ತೊಬ್ಬರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಟೀಂ ಇಂಡಿಯಾ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ತಂಡದ ಥ್ರೋಡೌನ್ ಪರಿಣತ ರಾಘವೇಂದ್ರ ಅವರು ಜು.10ರಂದು ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ.

ಈ ಹಿಂದೆ ಕುಕ್ಕೆಗೆ ಬಂದಿದ್ದ ಇವರು ಟೀಂ ಇಂಡಿಯಾ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದರೆ ಸೇವೆ ನೆರವೇರಿಸುವುದಾಗಿ ಹರಕೆ ಮಾಡಿಕೊಂಡಿದ್ದರು. ಅದರಂತೆ ಶ್ರೀದೇವರಿಗೆ ಆರಂಭದಲ್ಲಿ ಸಂಕಲ್ಪ ಮಾಡಿದರು. ಬಳಿಕ ಮಹಾಭಿಷೇಕ ಸೇವೆ ಸಮರ್ಪಿಸಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾದ ರಾಘವೇಂದ್ರ, ಭಾರತ ಕ್ರಿಕೆಟ್ ತಂಡದ ಥ್ರೋಡೌನ್ ಪರಿಣತರಾಗಿ ಕಳೆದ ಕೆಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪರಿಚಯದವರ ಮೂಲಕ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಸೇರಿದ್ದ ಅವರು ಕಾಲಕ್ರಮೇಣ ಭಾರತ ತಂಡದ ಭಾಗವಾಗಿದ್ದಾರೆ. ಸ್ವಂತ ಶ್ರಮದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಘವೇಂದ್ರ, ಭಾರತ ತಂಡದ ಬ್ಯಾಟಿಂಗ್ ಯಶಸ್ಸಿನಲ್ಲಿ ಅಮೂಲ್ಯ ಕಾಣಿಕೆ ನೀಡುತ್ತಿದ್ದಾರೆ. ಥ್ರೋಡೌನ್ ಕಲೆಯ ಮೂಲಕ ಬ್ಯಾಟರ್‌ಗಳ ತರಬೇತಿಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ.

error: Content is protected !!