ಉಡುಪಿ: ಬಬ್ಬು ಸ್ವಾಮಿ ಸನ್ನಿಧಾನದಲ್ಲಿ ಕಳ್ಳತನ..!: ಕಳ್ಳನ ಪತ್ತೆಗಾಗಿ ದೈವಸ್ಥಾನದಲ್ಲಿ ಭಕ್ತರಿಂದ ಮೊರೆ: ಅಭಯ ನೀಡಿದ ದೈವ: 24 ಗಂಟೆ ಒಳಗೆ ಕಳ್ಳ ಸೆರೆ: ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ..?

ಉಡುಪಿ: ಬಬ್ಬು ಸ್ವಾಮಿ ಸನ್ನಿಧಾನದಲ್ಲಿ ಜು.4 ರಂದು ಕಳ್ಳತನ ನಡೆದಿದ್ದು ಕಳ್ಳನು 24 ಗಂಟೆಯೊಳಗೆ ಪತ್ತೆಯಾಗಬೇಕೆಂದು ಭಕ್ತರು ಪ್ರಾರ್ಥಿಸಿದ್ದರು. ಅದರಂತೆ ಕಳ್ಳ 24 ಗಂಟೆ ಒಳಗೆ ಕಳ್ಳ ಸೆರೆಸಿಕ್ಕ ಘಟನೆ ಚಿಟ್ಪಾಡಿ ಕಸ್ತೂರ್ಬಾ ನಗರದಲ್ಲಿ ನಡೆದಿದೆ.

ಮಧ್ಯರಾತ್ರಿ ಸನ್ನಿಧಾನದ ಒಳಗೆ ನುಗ್ಗಿದ ಕಳ್ಳ ಕಾಣಿಕೆ ಡಬ್ಬಿ ಒಡೆದು ಕಳ್ಳತನ ಮಾಡಿದ್ದ. ಮರುದಿನ ಅಂದರೆ ಜು.5 ಂದು ಈ ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ವಿಚಾರ ತಿಳಿಯುತ್ತಿದ್ದಂತೆ ಭಕ್ತರು ಕಳ್ಳನ ಪತ್ತೆಗಾಗಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದರು. ದೈವದ ಸನ್ನಿಧಾನದಲ್ಲಿ ಕಳ್ಳತನ ಮಾಡಿದರೆ ಅಪಚಾರವಾಗುವುದಿಲ್ಲವೇ? ಎಂದು ಭಕ್ತರು ದೈವಕ್ಕೆ ಪ್ರಶ್ನಿಸಿದ್ದರು. ಇದಕ್ಕೆ ಉತ್ತರವಾಗಿ 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವ ಭಕ್ತರಿಗೆ ಅಭಯ ನೀಡಿತ್ತು.

ಕಳ್ಳತನ ಮಾಡಿದ್ದ ಕಳ್ಳನ ಕೃತ್ಯ ಸಿಸಿ ಕ್ಯಾಮರದಲ್ಲಿ ಸರಿಯಾಗಿದ್ದನ್ನ ಬಹುತೇಕ ಭಕ್ತರು ಗಮನಿಸಿದ್ದರು. ಅದಾದ ಬಳಿಕ ಸಿಸಿ ಕ್ಯಾಮೆರಾದಲ್ಲಿ ನೋಡಿದ ಕಳ್ಳನ ಚಹರೆಯನ್ನು ಹೋಲುವ ವ್ಯಕ್ತಿಯೊಬ್ಬ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಿದ್ರೆ ಮಾಡುತ್ತಿರುವುದನ್ನ ಸ್ಥಳೀಯ ಆಟೋ ರಿಕ್ಷಾ ಚಾಲಕರೋರ್ವರು ಗಮನಿಸಿದ್ದಾರೆ. ತಕ್ಷಣ ಅವರು ಸ್ಥಳೀಯ ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಕಳ್ಳನನ್ನ ಬಂಧಿಸಿದ್ದಾರೆ.

error: Content is protected !!