ಅಮೇರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ..!

 

 

ಚುನಾವಣಾ  ರ‍್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಮತ್ತು ರಿಪಬ್ಲಿಕನ್ ಪಕ್ಷದ ನಾಯಕ ಡೊನಾಲ್ಡ್ ಟ್ರಂಪ್ ಅವರ ಮೇಲೆ ಪೆನ್ಸಿಲ್ವೇನಿಯಾದಲ್ಲಿ  ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಟ್ರಂಪ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿಯಲ್ಲಿ ಟ್ರಂಪ್ ಕಿವಿಗೆ ಗಾಯವಾಗಿದೆ. ಅಮೆರಿಕ ಭದ್ರತಾ ಪಡೆಗಳು ಘಟನಾ ಸ್ಥಳದಲ್ಲಿ ಶಂಕಿತ ಶೂಟರ್​ನನ್ನು ಹೊಡೆದುರುಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

error: Content is protected !!