ಶಿರೂರು ಗುಡ್ಡ ಕುಸಿತ: ಮತ್ತೊಂದು ಮೃತದೇಹ ಪತ್ತೆ: ಮತ್ತಷ್ಟು ಗುಡ್ಡ ಕುಸಿಯುವ ಎಚ್ಚರಿಕೆ ನೀಡಿದ ಭೂ ವಿಜ್ಞಾನಿಗಳ ತಂಡ: ಕಾರ್ಯಾಚರಣೆಗೆ ಇಸ್ರೋ ಯೋಧರ ನೆರವು


ಕಾರವಾರ: ಅಂಕೋಲದ ಶಿರೂರಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ 11 ಮಂದಿ ಮೃತರಾಗಿದ್ದು, ಕಾರ್ಯಚರಣೆಯಲ್ಲಿ 8 ದಿನದ ಬಳಿಕ ಮಹಿಳೆಯೋರ್ವರ ಮೃತದೇಹ ಪತ್ತೆಯಾಗಿದೆ.

ದುರಂತ ಸಂಭವಿಸಿ ಒಂದು ವಾರ ಕಳೆದಿದ್ದು, ಈವರೆಗೆ ಒಟ್ಟು 8 ಮೃತದೇಹಗಳು ಪತ್ತೆಯಾಗಿವೆ. ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನದ ಮೊರೆಹೋಗಿರುವ ಜಿಲ್ಲಾಡಳಿತ ಇಸ್ರೋ ಜೊತೆಗೆ ಯೋಧರ ನೆರವು ಪಡೆದಿದೆ.

ಘಟನೆಯ ಸಂದರ್ಭದಲ್ಲಿ ನದಿಯಲ್ಲಿ ತೇಲಿಹೋದ ಗಂಗೆಕೊಳ್ಳದ ಲೋಕೇಶ್ ನಾಯ್ಕ, ಶಿರೂರಿನ ಜಗನ್ನಾಥ ಜಟ್ಟಿ, ಉಳವರೆ ಗ್ರಾಮದ ಸಣ್ಣಿ ಹನುಮಂತಗೌಡ, ಕೇರಳ ಮೂಲದ ಅರ್ಜುನ್ ಶವ ಪತ್ತೆಯಾಗಬೇಕಿದೆ. ಜೊತೆಗೆ ಟ್ರಕ್, ಟ್ಯಾಂಕರ್‌ಗಳು ಮಾತ್ರ ಪತ್ತೆಯಾಗಿಲ್ಲ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಆರ್ಮಿ ಕಮಾಂಡೋಗಳ ತಂಡದಿಂದ ಶೋಧ ಕಾರ್ಯ ಮುಂದುವರೆದಿದೆ. ಈ ಭಾಗದ ಮಣ್ಣನ್ನು ಪರೀಕ್ಷೆ ಮಾಡಿದ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ಭೂ ವಿಜ್ಞಾನಿಗಳ ತಂಡ ಮತ್ತೆ ಈ ಭಾಗದಲ್ಲಿ ಗುಡ್ಡ ಕುಸಿಯುವ ಸಾಧ್ಯತೆಯ ವರದಿ ನೀಡಿದೆ.

error: Content is protected !!