ಕೇರಳ: ಕೆಲವೇ ಗಂಟೆಗಳ ಅಂತರದಲ್ಲಿ ಎರಡು ಬಾರಿ ಗುಡ್ಡ ಕುಸಿದು 100ಕ್ಕೂ ಹೆಚ್ಚು ಜನರು ಮಣ್ಣಿನ ಅವಶೇಷಗಳಡಿ ಸಿಲುಕಿರುವ ಘಟನೆ ಕೇರಳದ ವಯನಾಡಿನಲ್ಲಿ ಜು.30ರಂದು ಸಂಭವಿಸಿದೆ.
ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಸುಮಾರು ರಾತ್ರಿ 2 ಗಂಟೆಗೆ ಮೊದಲ ಭೂಕುಸಿತ ಸಂಭವಿಸಿದ್ದು ನಂತರ, ಮುಂಜಾನೆ 4.10 ರ ಸುಮಾರಿಗೆ ಮತ್ತೊಂದು ಭೂಕುಸಿತ ಸಂಭವಿಸಿದೆ. ಈ ವೇಳೆ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.
ರಕ್ಷಣಾ ಕಾರ್ಯ ತೀವ್ರಗೊಂಡಿದ್ದು ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಎರಡು IAF ಈ ಹೆಲಿಕಾಪ್ಟರ್‌ಗಳು Mi-17 ಮತ್ತು ALH ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಸೂಲೂರಿನಿಂದ ಹೊರಟಿದ್ದು ಎನ್‌ಡಿಆರ್‌ಎಫ್‌ನ ಹೆಚ್ಚುವರಿ ತಂಡ ವಯನಾಡ್‌ಗೆ ತೆರಳುತ್ತಿದೆ.
ನಿರಂತರ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.
ಜಾಹೀರಾತು