ಕೇರಳ: ವಯನಾಡ್‌ನ ಗುಡ್ಡಗಾಡು ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್ ಮತ್ತು ರಾಜ್ಯ ತಂಡಗಳೂ ಕೂಡಾ ಸಕ್ರಿಯವಾಗಿದ್ದು ನೌಕಾಪಡೆ ಮತ್ತು ವಾಯುಪಡೆಯೂ ನಿರಂತರ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಪರಿಹಾರ ಹಾಗೂ ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದ್ದು ತಾತ್ಕಾಲಿಕ ಸೇತುವೆಯ ಮೂಲಕ ಸುಮಾರು 1,000 ಜನರನ್ನು ರಕ್ಷಿಸುವಲ್ಲಿ ಸೇನೆ ಯಶಸ್ವಿಯಾಗಿದೆ.
ಮೆಪ್ಪಾಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸುಮಾರು 50 ಮೃತದೇಹಗಳನ್ನು ಇರಿಸಲಾಗಿದ್ದು, ಗಾಯಗೊಂಡಿರುವ ಕನಿಷ್ಠ 116 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಭೀಕರ ಭೂಕುಸಿತದಲ್ಲಿ ನಾಲ್ಕರಿಂದ ಐದು ಗ್ರಾಮಗಳು ಸಂಪೂರ್ಣವಾಗಿ ಭೂಸಮಾಧಿಯಾಗಿ ಅಪಾರ ಪ್ರಮಾಣದಲ್ಲಿ ಸಾವು-ನೋವು, ಆಸ್ತಿ-ಪಾಸ್ತಿಗೆ ಹಾನಿಯಾಗಿದೆ.