ಹಿಮಾಚಲ ಪ್ರದೇಶ: ದೇಶಾದ್ಯಂತ ವಿಪರೀತ ಮಳೆಯಾಗುತ್ತಿದ್ದು ಅಲ್ಲಲ್ಲಿ ಭಾರೀ ಅನಾಹುತಗಳು ಸಂಭವಿಸುತ್ತಿದೆ. ಶಿರೂರು ಗುಡ್ಡ ಕುಸಿತ, ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂ ಕುಸಿತದ ಬೆನ್ನಲ್ಲೆ ಶಿಮ್ಲಾದಲ್ಲಿ ಮೇಘಸ್ಫೋಟ ಉಂಟಾಗಿದೆ.
ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ 100 ಕಿಮೀ ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ಮೇಘಸ್ಫೋಟ ಉಂಟಾಗಿದೆ. ಹೀಗಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಈವರೆಗೆ 20 ಮಂದಿ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.
ಶಿಮ್ಲಾ ಡಿಸಿ ಅನುಪಮ್ ಕಶ್ಯಪ್ ಮತ್ತು ಎಸ್ಪಿ ಶಿಮ್ಲಾ ಸಂಜೀವ್ ಗಾಂಧಿ ಸ್ಥಳಕ್ಕೆ ತೆರಳಿದ್ದು ಎನ್‌ಡಿಆರ್‌ಎಫ್ ತಂಡಗಳನ್ನೂ ಸ್ಥಳಕ್ಕೆ ಕಳುಹಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಎನ್‌ಡಿಎಸ್‌ಆರ್‌ಎಫ್ ತಂಡ, ಪೊಲೀಸರು ಮತ್ತು ರಕ್ಷಣಾ ತಂಡ ಘಟನಾ ಸ್ಥಳಕ್ಕೆ ತೆರಳಿದೆ. ಆಂಬ್ಯುಲೆನ್ಸ್ ಸೇರಿದಂತೆ ಎಲ್ಲ ಮೂಲ ಸೌಕರ್ಯಗಳನ್ನು ರಕ್ಷಣಾ ಕಾರ್ಯಾಚರಣೆಗೆ ಒಳಪಡಿಸಲಾಗಿದೆ.
ಕರ್ನಾಟಕ ಹಾಗೂ ದೆಹಲಿಯಲ್ಲೂ ಕೂಡ ವರುಣನ ಆರ್ಭಟ ಜೋರಾಗಿ ಹಲವೆಡೆ ಭಾರಿ ಅನಾಹುಗಳನ್ನೇ ಸೃಷ್ಟಿ ಮಾಡಿವೆ.