ನಗರ , ಪುರಸಭೆ, ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ಪ್ರಕಟ: ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನ ಸಾಮಾನ್ಯ ,ಉಪಾಧ್ಯಕ್ಷ ಸಾಮಾನ್ಯ ಮಹಿಳೆ: ಅಧ್ಯಕ್ಷ ಸ್ಥಾನಕ್ಕೆ ಜಯಾನಂದ ಗೌಡ ಬಹುತೇಕ ಫಿಕ್ಸ್…?

 

 

ಬೆಳ್ತಂಗಡಿ: ನಗರಾಭಿವೃದ್ಧಿ ಇಲಾಖೆಯು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷ – ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ.

61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ಪಟ್ಟಿ ಪ್ರಕಟಿಸಲಾಗಿದೆ. 61 ನಗರ ಸಭೆಗಳಲ್ಲಿನ ಅಧ್ಯಕ್ಷ ಹುದ್ದೆಗಳ ಪೈಕಿ 16ನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿದೆ. ಇನ್ನು 15 ಅಧ್ಯಕ್ಷ ಹುದ್ದೆಗಳನ್ನು ಸಾಮಾನ್ಯ ಮಹಿಳೆಯರಿಗೆ ಮೀಸಲು ಮಾಡಲಾಗಿದೆ.5 ಎಸ್​ಸಿ ಮೀಸಲಾತಿ ನೀಡಲಾಗಿದ್ದರೆ, 5 ಎಸ್​ಸಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗಿದೆ. 2 ಎಸ್​ಟಿ ಸಮುದಾಯಕ್ಕೆ ಮೀಸಲಾತಿ ನೀಡಿದ್ದರೆ, 2 ಎಸ್​ಟಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ.ಬೆಳ್ತಂಗಡಿ ಪಟ್ಟಣ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ‌ಸಾಮಾನ್ಯ ಮಹಿಳೆಗೆ ಬಂದಿದ್ದು ಒಟ್ಟು 11 ಸದಸ್ಯರನ್ನೊಳಗೊಂಡ ಇಲ್ಲಿ 7 ಬಿಜೆಪಿ ಹಾಗೂ 4 ಕಾಂಗ್ರೆಸ್ ಸದಸ್ಯರಿದ್ದಾರೆ.  ಅಧ್ಯಕ್ಷರಾಗಿ ಜಯಾನಂದ ಗೌಡ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ತುಳಸಿ  ಆಯ್ಕೆಯಾಗುವುದು ಬಹುತೇಕ ಖಚಿತ ಎಂಬುವುದು ಈಗಾಗಲೇ  ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ. ಅದಲ್ಲದೇ ಸದಸ್ಯ ಶರತ್ ಶೆಟ್ಟಿ ಕೂಡ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಪಕ್ಷ ಯಾರನ್ನು ಸೂಚಿಸುತ್ತದೆ ಎಂಬುವುದು ಕಾದು ನೋಡಬೇಕಾಗಿದೆ.

error: Content is protected !!