ಲಾಯಿಲ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ತಾರಾನಾಥ್ ನಾಯ್ಕ : ಪಡಂಗಡಿಯಿಂದ ಗ್ರೇಡ್ 1 ಕಾರ್ಯದರ್ಶಿಯಾಗಿ ಮುಂಬಡ್ತಿಗೊಂಡು ವರ್ಗಾವಣೆ:

 

 

ಬೆಳ್ತಂಗಡಿ:ತಾಲೂಕಿನ ಗ್ರೇಡ್ 1 ಪಂಚಾಯತ್ ಗಳಲ್ಲೊಂದಾದ ಲಾಯಿಲ ಗ್ರಾಮ ಪಂಚಾಯತ್ ಗೆ ಕಾರ್ಯದರ್ಶಿಯಾಗಿ ತಾರಾನಾಥ್ ವರ್ಗಾವಣೆ ಗೊಂಡಿದ್ದಾರೆ.ಗ್ರಾಮ ಪಂಚಾಯತ್ ಕಾರ್ಯದರ್ಶಿ ಕಂ ಗ್ರಾಮೀಣಾಭಿವೃದ್ಧಿ ಸಹಾಯಕರು ಗ್ರೇಡ್ ೨ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ ನೌಕರರಿಗೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕಂ ಗ್ರಾಮೀಣಾಭಿವೃದ್ಧಿ ಗ್ರೇಡ್ 1 ವೃಂದದ ಹುದ್ದೆಗೆ ಸ್ಥಾನವನ್ನು ಮುಂಬಡ್ತಿ ನೀಡಲಾಗಿದ್ದು ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ ೨ ಪಡಂಗಡಿ ಗ್ರಾಮ ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಹಿಸುತಿದ್ದ ತಾರಾನಾಥ ನಾಯ್ಕ. ಕೆ. ಇವರನ್ನು ಗ್ರೇಡ್ 1 ಲಾಯಿಲ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಈ ಬಗ್ಗೆ ದ.ಕ. ಜಿಲ್ಲಾ ಪಂಚಾಯತ್ ನೇಮಕಾತಿ ಪ್ರಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ‌.  ಅಗಸ್ಟ್ 14 ಬುಧವಾರ ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಕರ್ತವ್ಯ  ನಿರ್ವಹಿಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ.ಮಲವಂತಿಗೆ ಗ್ರಾಮ ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಅಂಬರೀಶ್ ಅವರು ನಿಡ್ಲೆ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿಯಾಗಿ ಮುಂಬಡ್ತಿಗೊಂಡು ವರ್ಗಾವಣೆಗೊಂಡಿದ್ದಾರೆ.

error: Content is protected !!