ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ: ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಲಾಖೆಯಿಂದ ಕ್ರಮ

ಮಡಿಕೇರಿ: ಕೇರಳದ ವಯನಾಡು ಭೂಕುಸಿತ ದುರಂತದಿAದ ಎಚ್ಚೆತ್ತ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದಲ್ಲಿ ಅರಣ್ಯ ಒತ್ತುವರಿ, ಅಕ್ರಮ ತೋಟಗಳು ಹಾಗೂ ಅನಧಿಕೃತ ರೆಸಾರ್ಟ್ಗಳ ವಿರುದ್ಧ ಕ್ರಮ ಜರುಗಿಸಲು ಮುಂದಾಗಿದೆ.

ಪಶ್ಚಿಮ ಘಟ್ಟಗಳಲ್ಲಿನ ಅರಣ್ಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿಕೆ ಬೆನ್ನಲ್ಲೇ ಅರಣ್ಯ ಇಲಾಖೆ ಒತ್ತುವರಿ ತೆರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದ್ದು ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 5,551 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದೆ.

ಚಿಕ್ಕಮಗಳೂರು ತಾಲ್ಲೂಕಿನ ಮತ್ತಾವರ ಮೀಸಲು ಅರಣ್ಯದಲ್ಲಿ ಒತ್ತುವರಿ ಮಾಡಿ ಕಾಫಿ ತೋಟ ಮಾಡಿದ್ದ 20 ಎಕರೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಆ.10ರಂದು ತೆರವುಗೊಳಿಸಿದರು.

ಕೊಪ್ಪ ಅರಣ್ಯವ್ಯಾಪ್ತಿಯಲ್ಲಿ ಒತ್ತುವರಿ ಗುರುತಿಸಿ ಮಾರ್ಕ್ ಮಾಡಲಾಗಿದ್ದು, ಆ.11ರಂದು ಕಾರ್ಯಾಚರಣೆ ನಡೆಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ಹೇಳಿದರು.
ವಸ್ತಾರೆ ಗ್ರಾಮದ ಸರ್ವೆ ನಂಬರ್ 369ರಲ್ಲಿ ಹಲವರು ಒತ್ತುವರಿ ಮಾಡಿ ಕಾಫಿ ಗಿಡಗಳನ್ನು ನೆಟ್ಟಿದ್ದು, ಅರಣ್ಯ ಜಾಗದಲ್ಲಿದ್ದ ಕಾಫಿ ಗಿಡಗಳನ್ನು ಕತ್ತರಿಸಿ ಅರಣ್ಯ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ.

ಸದ್ಯ 2015ರ ನಂತರದ ಪ್ರಕರಣಗಳನ್ನು ಗುರುತಿಸಿ ಅಕ್ರಮ ತೋಟಗಳು ಹಾಗೂ ಅನಧಿಕೃತ ರೆಸಾರ್ಟ್ಗಳ ವಿರುದ್ಧ ಕ್ರಮ ಜರುಗಿಸಲು ಮುಂದಾಗಿದ್ದಕ್ಕೆ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾಕಷ್ಟು ಜನರು ವಿರೋಧ ವ್ಯಕ್ತಪಡಿಸಿದ್ದಾರೆ.

error: Content is protected !!