ಅನ್ನಭಾಗ್ಯ ಯೋಜನೆಯಲ್ಲಿ ಇನ್ನು ಅಕ್ಕಿ ಬದಲು ಹಣವಲ್ಲ..?: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದೇನು?: ರಾಜ್ಯ ಸರಕಾರದ ಸಮೀಕ್ಷೆಯ ಫಲಿತಾಂಶವೇನು..?

ನವದೆಹಲಿ: ರಾಜ್ಯ ಸರಕಾರ ಅನ್ನಭಾಗ್ಯ ಯೋಜನೆ ಮೂಲಕ 10ಕೆ.ಜಿ ಅಕ್ಕಿ ನೀಡಲು ನಿರ್ಧರಿಸಲಾಗಿತ್ತಾದರೂ ಸದ್ಯಕ್ಕೆ ಓರ್ವ ಸದಸ್ಯನಿಗೆ ತಲಾ5 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ಇನ್ನುಳಿದ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದ್ದು ಆದರೆ ಮುಂದೆ ಈ ಹಣ ಕೂಡ ಜಮೆಯಾಗಲ್ಲ ಎಂಬ ಮಾಹಿತಿ ಲಭ್ಯವಾಗುತ್ತಿದ್ದೆ.

ರಾಜ್ಯ ಸರಕಾರ ನಡೆಸಿದ ಸಮೀಕ್ಷೆಯಲ್ಲಿ ಶೇ 93ರಷ್ಟು ಫಲಾನುಭವಿಗಳು ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯ ಬದಲಿಗೆ 5 ಕೆಜಿ ಅಕ್ಕಿ ಜತೆಗೆ ಇತರೆ ಅಗತ್ಯ ವಸ್ತುಗಳನ್ನು ಪಡೆಯಲು ಆಸಕ್ತಿ ತೋರಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ. ಹೀಗಾಗಿ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆಯನ್ನು ನಿಲ್ಲಿಸಿ, ಎಣ್ಣೆ, ಬೇಳೆ, ಸಕ್ಕರೆ ಮತ್ತು ಇತರ ಆಹಾರ ಪದಾರ್ಥಗಳನ್ನು ನೀಡುವ ಸಾಧ್ಯತೆ ಇದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಯಾವ ರೀತಿ ಮಾಡಬೇಕು ಎಂದು  ಶೀಘ್ರವೇ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದ್ದಾರೆ.

error: Content is protected !!