ಬೆಳ್ತಂಗಡಿ: ಸ್ವಾತಂತ್ರ‍್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರದಮದಲ್ಲಿ ಹರ್ ಘರ್ ತಿರಂಗಾ ಅಭಿಯಾನ ನಡೆಯುತ್ತಿದ್ದು ಈ ಹಿನ್ನಲೆ ಆ.14ರಂದು ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಯಿಂದ ಬೆಳ್ತಂಗಡಿ ತಾಲೂಕು ಕಛೇರಿವರೆಗೆ ನಡೆದ ಕಾಲ್ನಡಿಗೆ ಜಾಥಾಕ್ಕೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಚಾಲನೆೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿ ಭವಾನಿಶಂಕರ್ ಅವರು ‘ಸರ್ಕಾರದ ಆದೇಶದಂತೆ ಹರ್ ಘರ್ ತಿರಂಗಾ ಅಭಿಯಾನದಡಿ ರಾಷ್ಟçಧ್ವಜಾರೋಹಣವನ್ನು ಪ್ರತಿ ಮನೆ ಮನೆಯಲ್ಲಿ, ಕಛೇರಿಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಮಾಡುವುದರ ಮೂಲಕ ದೇಶಕ್ಕಾಗಿ ಮಡಿದ ಸ್ವಾತಂತ್ರ‍್ಯ ಹೋರಾಟಗಾರರನ್ನು, ಹುತಾತ್ಮರನ್ನು ನೆನಪಿಸಿ ಗೌರವ ಸಲ್ಲಿಸಲಾಗುವುದು. ಆದ್ದರಿಂದ ಆಗಷ್ಟ್ 15ರಂದು ತಮ್ಮ ಮನೆಗಳಲ್ಲಿ, ಕಚೇರಿಗಳಲ್ಲಿ, ಧ್ವಜಾರೋಹಣ ಮಾಡಿ ದೇಶಕ್ಕಾಗಿ ಪ್ರಾಣತೆತ್ತವರನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸೋಣ’ ಎಂದರು.
ಕಾಲ್ನಡಿಗೆ ಜಾಥಾದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಮಕ್ಕಳು, ಶಾಲಾ ಶಿಕ್ಷಕರು, ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.