ಬೆಳ್ತಂಗಡಿ: ಸವಣಾಲು ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರಗಳ ತೆರವು ಕಾರ್ಯಚರಣೆ ಆ.14ರಂದು ನಡೆದಿದೆ.
ಕಳೆದ ವಾರ ನಿರಂತರವಾಗಿ ಸುರಿದ ಮಳೆಯಿಂದ ಕಲ್ಲಗುಡ್ಡೆ , ಮೇಲಂತಬೆಟ್ಟು ಬಳಿ ಗುಡ್ಡ ಕುಸಿದಿದ್ದು, ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆಗೆ ಸೂಚಿಸಿದ್ದರು. ಈ ಹಿನ್ನೆಲೆ ಇಂದು ಅಪಾಯಕಾರಿ ಮರಗಳ ತೆರವು ಕಾರ್ಯ ನಡೆದಿದೆ.
ಈ ವೇಳೆ ಅರಣ್ಯ ಇಲಾಖೆಯವರು ಮೆಸ್ಕಾಂ ಎಇ ಹಾಗೂ ಸಿಬ್ಬಂದಿಗಳು , ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಚಂದ್ರರಾಜ್ ನೂಜೇಲು ಸೇರಿದಂತೆ ಸ್ಥಳೀಯರು ಸ್ಥಳದಲ್ಲಿದ್ದು ಸಹಕಾರ ನೀಡಿದರು.