ಸಾಂದರ್ಭಿಕ ಚಿತ್ರ
ಬೆಂಗಳೂರು: ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಸಂಸ್ಥೆಯ ಕರ್ತವ್ಯನಿರತ ಯುವ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಕರ್ನಾಟಕ ರಾಜ್ಯ ವೈದ್ಯಾಧಿಕಾರಿಗಳ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘ ಇಂದು (ಆ.17) ಒಂದು ದಿನದ ಪ್ರತಿಭಟನೆಯನ್ನು ಕೈಗೊಂಡಿದೆ.
ಇದಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿ ತುರ್ತು ಸೇವೆ ಹೊರತುಪಡಿಸಿ, ಇತರೆ ಎಲ್ಲಾ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆರೋಗ್ಯ ಸಚಿವರಿಗೆ ಪತ್ರ ನೀಡಿದೆ. ಹೀಗಾಗಿ ಇಂದು ರಾಜ್ಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ವೈದ್ಯಕೀಯ ಸೇವೆಯು ವ್ಯತ್ಯಯವಾಗಿ ಸಾರ್ವಜನಿಕ ಆರೋಗ್ಯ ಸೇವೆಗೆ ದಕ್ಕೆಯಾಗುವ ಸಾಧ್ಯತೆ ಇದೆ.
ಈ ಬಗ್ಗೆ ಸರ್ಕಾರ, ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಎಲ್ಲಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು, ಅಗತ್ಯ ಮುನ್ನೆಚ್ಚರಿಕಾ ಕ್ರಮವಹಿಸಿ ಸಾರ್ವಜನಿಕ ತುರ್ತು ವೈದ್ಯಕೀಯ ಸೇವೆಗೆ ಯಾವುದೇ ತೊಂದರೆಯಾಗದAತೆ ಕ್ರಮ ವಹಿಸಬೇಕು. ಇಂದು ಯಾವುದೇ ವೈದ್ಯರಿಗೆ ರಜೆ ಮಂಜೂರು ಮಾಡಬಾರದು ಎಂದು ಆದೇಶ ಹೊರಡಿಸಿದೆ.