ಉಜಿರೆ: ಬೃಹತ್ ರಕ್ತದಾನ ಶಿಬಿರ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಹಾಗೂ ವಿವಿಧ ಸಂಸ್ಥೆಗಳ ಸಹಯೋಗ

ಉಜಿರೆ: ಎಸ್.ಡಿ.ಎಂ.ಕಾಲೇಜು ಉಜಿರೆ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸುವರ್ಣ ಸಂಭ್ರಮಾಚರಣೆ, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳು ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಪತ್ರಕರ್ತರ ಸಂಘ ಬೆಳ್ತಂಗಡಿ, ಎಸ್.ಡಿ.ಎಂ.ಮಲ್ಟಿ ಹಾಸ್ಪಿಟಲ್ ಉಜಿರೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಆ. 18 ರಂದು ಬೃಹತ್ ರಕ್ತದಾನ ಶಿಬಿರ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆಯಿತು.

ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಸಿರಿ ಸಂಸ್ಥೆಯ ವ್ಯವಸ್ಥಾಪನಾ ನಿರ್ದೇಶಕ ಕೆ.ಎಮ್ ಜನಾರ್ಧನಾ ಅವರು ‘‘ರಕ್ತದಾನ ಮಾಡುವುದರಿಂದ ವ್ಯಕ್ತಿಯ ಜೀವ ಉಳಿಸಿದ ಭಾವನೆ ಜತೆಯಲ್ಲಿ ದಾನಿಯ ಆರೋಗ್ಯ ವೃದ್ಧಿಯಾಗುತ್ತದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷಾರಾದ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎ ಕುಮಾರ ಹೆಗ್ಡೆ ಅವರು ಮಾತನಾಡಿ “ಜೀವವನ್ನು ಉಳಿಸಲು ನಾವು ವೈದ್ಯರಾಗಬೇಕಿಲ್ಲ, ರಕ್ತದಾನ ಮಾಡಿದರೆ ಸಾಕು, ರಕ್ತದಾನ ಮಾಡಿ ಜೀವ ಉಳಿಸಿದ ಸಂತೃಪ್ತಿ ಹೊಂದಬಹುದು” ಎಂದರು.

ಮುಖ್ಯ ಅತಿಥಿಗಳಾಗಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ಧನ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ, ಯೋಜನಾಧಿಕಾರಿ ಸುರೇಂದ್ರ, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಾದ ಅಕ್ಷರ ಪ್ರಿಂಟರ್ಸ್ ಮಾಲಕ ಅನಿಲ್ ಕುಮಾರ್ ಶಿಬಾಜೆ, ಯೂಪ್ಲಸ್ ಚಾನೆಲ್ ಮುಖ್ಯಸ್ಥ ದಿನೇಶ್ ಕೋಟ್ಯಾನ್, ಪ್ರಮುಖರಾದ ರಾಘವೇಂದ್ರ ನಿಡಿಗಲ್, ರಶ್ಮಿ ಸ್ಟುಡಿಯೋ ಮಾಲಕ ರಾಮಕೃಷ್ಣ ರೈ,ಯಶೋಧರ ನಾಯ್ಕ್ ಇವರನ್ನು ಸನ್ಮಾನಿಸಲಾಯಿತು.


ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸುರಕ್ಷಾ ಮೆಡಿಕಲ್ ನ ಶ್ರೀಧರ್ ಕೆ.ವಿ ವಂದಿಸಿದರು. ತಿಮ್ಮಯ್ಯ ನಾಯ್ಕ ಮತ್ತು ಸಮೀಕ್ಷಾ ಶಿರ್ಲಾಲು ಕಾರ್ಯಕ್ರಮ ನಿರೂಪಿಸಿದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಡಾ.ಮಹೇಶ್ ಕುಮಾರ್ ಶೆಟ್ಟಿ ಹೆಚ್, ದೀಪಾ ಆರ್.ಪಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಹಕರಿಸಿದರು.

error: Content is protected !!