ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಕೆಲವು ಕಡೆ ಮಳೆಯ ಪ್ರಮಾಣ ತಗ್ಗಿದ್ದು ಆದರೆ ಹಲವು ಕಡೆಗಳಲ್ಲಿ ಯಥೆಚ್ಚವಾಗಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಪ್ರಕಾರ ಆಗಸ್ಟ್ 27ರವರೆಗೂ ಕೆಲವು ಕಡೆಗಳಲ್ಲಿ ಮಳೆಯಬ್ಬರ ಇರಲಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದ್ದು ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ,.
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಿಂದ ಹೊರವಲಯದಲ್ಲಿರುವ ಬಿದರೆ -ಗುಬ್ಬಿ ಸಂಪರ್ಕ ರಸ್ತೆಯಲ್ಲಿ ಇರುವ ರೈಲ್ವೆ ಅಂಡರ್ ಪಾಸ್‌ನಲ್ಲಿ ಮಳೆ ನೀರು ತುಂಬಿ ಅವಂತಾರ ಸೃಷ್ಟಿಸಿತ್ತು.
ದಾವಣಗೆರೆ ಜಿಲ್ಲೆಯಲ್ಲಿ ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕುಗಳಲ್ಲಿ ರಾತ್ರಿ ಉತ್ತಮ ಮಳೆಯಾದ ಪರಿಣಾಮ ಸಾರ್ವಜನಿಕ ಆಸ್ಪತ್ರೆಗೆ ನೀರು ನುಗ್ಗಿದ್ದಲ್ಲದೆ ಎಮ್ಮೆಯೊಂದು ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದೆ.