“30 ವರ್ಷಗಳಲ್ಲಿ ಈ ರೀತಿಯ ಪ್ರಕರಣವನ್ನು ನೋಡಿಲ್ಲ: ಮರಣೋತ್ತರ ಪರೀಕ್ಷೆ ನಡೆಸಲು ವಿಳಂಬ ಮಾಡಿದ್ದೇಕೆ..?”: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಕೇಸ್ ಬಗ್ಗೆ ಸುಪ್ರೀಂಕೋರ್ಟ್

ದೆಹಲಿ ಆ.22: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರೆöÊನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ-ಕೊಲೆ ಪ್ರಕರಣದಲ್ಲೂ ತನಿಖಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಲು ವಿಳಂಬ ಮಾಡಿದ್ದರೆ ಎಂಬ ಆರೋಪವಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ತನಿಖಾಧಿಕಾರಿಗಳನ್ನು ಪ್ರಶ್ನಿಸಿದೆ.

ಪ್ರಕರಣದ ಬಗ್ಗೆ ವಿಚಾರಣೆ ಪುನರಾರಂಭಿಸಿದ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು “30 ವರ್ಷಗಳಲ್ಲಿ ಈ ರೀತಿಯ ಪ್ರಕರಣವನ್ನು ನೋಡಿಲ್ಲ” ಎಂದು ಹೇಳಿದೆ.

ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ‘ಮುಷ್ಕರ ನಿರತ ವೈದ್ಯರು ಕೆಲಸಕ್ಕೆ ಮರಳಲಿ. ಅವರು ಕರ್ತವ್ಯಕ್ಕೆ ಹಿಂತಿರುಗಿದ ನಂತರ ನ್ಯಾಯಾಲಯವು ಪ್ರತಿಕೂಲ ಕ್ರಮಗಳನ್ನು ತೆಗೆದುಕೊಳ್ಳದಂತೆ ನೋಡಿಕೊಳ್ಳುತ್ತದೆ’ ಎಂದಿದೆ.

“ವೈದ್ಯರು ಕೆಲಸಕ್ಕೆ ಹಿಂತಿರುಗದಿದ್ದರೆ ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಹೇಗೆ ಕಾರ್ಯನಿರ್ವಹಿಸುತ್ತದೆ?. ವೈದ್ಯರು ಕೆಲಸವನ್ನು ಪುನರಾರಂಭಿಸಬೇಕು, ಅವರಿಗೆ ಯಾವುದೇ ಸಮಸ್ಯೆಯುಂಟಾಗುವುದಿಲ್ಲ ಎಂದು ನಾವು ಅವರಿಗೆ ಭರವಸೆ ನೀಡುತ್ತೇವೆ. ಬಂಗಾಳ ಕ್ರಿಮಿನಲ್ ಪ್ರೊಸೀಜರ್ ಕೋಡ್ ಅನ್ನು ಅನುಸರಿಸುತ್ತಿಲ್ಲ. ನಾವು ಸಾಮಾನ್ಯವಾಗಿ ಕೆಲಸದ ಪರಿಸ್ಥಿತಿಗಳನ್ನು ಉಲ್ಲೇಖಿಸಿದ್ದೇವೆ. ನಾವು ಸಾರ್ವಜನಿಕ ಆಸ್ಪತ್ರೆಗಳಿಗೆ ಹೋಗಿದ್ದೇವೆ. ನನ್ನ ಕುಟುಂಬದ ಸದಸ್ಯರಲ್ಲಿ ಒಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದಾಗ ನಾನು ಸರ್ಕಾರಿ ಆಸ್ಪತ್ರೆಯ ನೆಲದ ಮೇಲೆ ಮಲಗಿದ್ದೇನೆ. ವೈದ್ಯರು 36 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ ಎಂದು ನಮಗೆ ತಿಳಿದಿದೆ ಎಂದಿದೆ ಸಿಜೆಐ.

error: Content is protected !!