ಇಂದಬೆಟ್ಟು ಗ್ರಾ.ಪಂ ನಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ: ಲೋಕಾಯುಕ್ತ ತನಿಖೆಯಲ್ಲಿ ಸತ್ಯಾಸತ್ಯತೆ ಬಯಲು: ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳಲು ವರದಿ ಸಲ್ಲಿಕೆ

ಬೆಳ್ತಂಗಡಿ : 2021-22ನೇ ಸಾಲಿನ 15 ನೇ ಹಣಕಾಸಿನ ಕಾಮಗಾರಿಯಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್‌ನ ನಾಲ್ವರು ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ನಡೆಸಿರುವ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ಮಾಡಿ 26 ಪುಟಗಳ ವರದಿ ನೀಡಿದ್ದು, ತನಿಖೆಯ ಮೂಲಕ ಕಾಮಗಾರಿಯಲ್ಲಿ ಎಲ್ಲವೂ ಅವ್ಯಹಾರ ನಡೆದಿರುವುದು ಬಹಿರಂಗವಾಗಿದೆ.

ಬಂಗಾಡಿ ನಿವಾಸಿ ಜಯರಾಮ.ಕೆ ಅವರು ಕಾಮಗಾರಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಸಂಬಂಧ ಬೆಂಗಳೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಇದೀಗ ಕ್ರಮ ಕೈಗೊಳ್ಳಲು ವರದಿಯನ್ನು ಹಿರಿಯ ಅಧಿಕಾರಿಗಳಿಗೆ ನೀಡಿದ್ದಾರೆ.

 


ಈ ಪ್ರಕರಣಕ್ಕೆ ಸಂಬಂಧಿಸಿ ಈ ಬಾರಿ ಜು.9 ಮತ್ತು 10 ರಂದು ಬೆಂಗಳೂರು ಲೋಕಾಯುಕ್ತ ಕೇಂದ್ರ ಕಚೇರಿಯ ಹಿರಿಯ ಉಪ ನಿರ್ದೇಶಕರು ತಾಂತ್ರಿಕ ವಿಭಾಗದ ಇಂಜಿನಿಯರ್ ಪ್ರಕಾಶ್ ಬಣಕಾರ್ ಮತ್ತು ಸಹಾಯಕ ಇಂಜಿನಿಯರ್ ತೇಜಶ್ರೀ ಮತ್ತು ಮಂಗಳೂರು ಲೋಕಾಯುಕ್ತ ಕಚೇರಿಯ ಸಿಬ್ಬಂದಿಗಳ ನೇತೃತ್ವದ ತಂಡ ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಆಗಮಿಸಿ ತನಿಖೆ ನಡೆಸಿ ಬಳಿಕ ವರದಿಯಲ್ಲಿ 1. ಬೆಳ್ತಂಗಡಿ ಪಂಚಾಯತ್ ರಾಜ್ ಸಹಾಯಕ ಇಂಜಿನಿಯರ್ ಹರ್ಷಿತ್ , 2.ಪಿಡಿಓ ಸವಿತಾ, 3. ಇಂದಬೆಟ್ಟು ಗ್ರಾ.ಪಂ ಅಧ್ಯಕ್ಷ ಅನಂದ.ಎ, 4. ನಿವೃತ್ತ ಪಂಚಾಯತ್ ರಾಜ್ ಕಿರಿಯ ಇಂಜಿನಿಯರ್ ಮೊಹಮ್ಮದ್ ಪಿ ಇವರು ನಾಲ್ಕು ಜನ ಕರ್ತವ್ಯ ಲೋಪ ಎಸಗಿರುವುದಾಗಿ ಲೋಕಾಯುಕ್ತ ಹಿರಿಯ ಅಧಿಕಾರಿಗಳಿಗೆ ನಾಲ್ಕು ಜನರ ವಿರುದ್ಧ ಕ್ರಮ ಕೈಗೊಳ್ಳಲು ಆ.5 ರಂದು ವರದಿ ಸಲ್ಲಿಸಿದ್ದಾರೆ.

ಸದ್ಯ ಲೋಕಾಯುಕ್ತ ಪೊಲೀಸರು, ಗ್ರಾಮ ಪಂಚಾಯತ್‌ನಲ್ಲಿ 13 ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಪತ್ತೆ ಹಚ್ಚಿದ್ದು 7 ಅಂಶಗಳನ್ನು ಅಭಿಪ್ರಾಯವನ್ನು ಬಹಿರಂಗಪಡಿಸಿದ್ದಾರೆ.

error: Content is protected !!