ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್‌ವೈ ಬಂಧಿಸದಂತೆ ನೀಡಿದ್ದ ಆದೇಶ ವಿಸ್ತರಣೆ


ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪೋಕ್ಸೋ ಪ್ರಕರಣದಲ್ಲಿ ಬಂಧಿಸದಂತೆ ಈ ಹಿಂದೆ ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ದಾಖಲಾಗಿದ್ದ ಪೋಕ್ಸೋ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ಸಂಬಂಧ, ಬಂಧಿಸದಂತೆ ನೀಡಿರುವ ಆದೇಶ ತೆರವು ಕೋರಿ ಸಿಐಡಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಆ.23 ರಂದು ಅರ್ಜಿಯ ವಿಚಾರಣೆ ವೇಳೆ ಸಿಐಡಿ ಪರ ವಕೀಲರು, ಯಡಿಯೂರಪ್ಪ ಅವರನ್ನು ಬಂಧಿಸದಂತೆ ವಿಧಿಸಿರುವ ಆದೇಶ ತೆರವುಗೊಳಿಸಲು ಕೋರಿ ಆಕ್ಷೇಪಣೆ ಸಲ್ಲಿಸಿದರು. ಈ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ಬಿಎಸ್‌ವೈ ಪರ ವಕೀಲರು ಕಾಲಾವಕಾಶ ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ. ಜೊತೆಗೆ ಆರೋಪಿಯನ್ನು ಬಂಧಿಸದಂತೆ ನ್ಯಾಯಪೀಠ ನೀಡಿದ್ದ ಆದೇಶ ವಿಸ್ತರಿಸಿ ವಿಚಾರಣೆಯನ್ನು ಆಗಸ್ಟ್ 30 ಕ್ಕೆ ನಿಗದಿ ಪಡಿಸಿತು.

error: Content is protected !!