ಬೆಳ್ತಂಗಡಿ:ವಿಧಾನಪರಿಷತ್ ಸದಸ್ಯ ಐವನ್ ಡಿ,ಸೋಜಾ ಅವರು ಕೆಲವು ದಿನಗಳ ಹಿಂದೆ ನಡೆದ ಪ್ರತಿಭಟನೆ ವೇಳೆ ದೇಶದ್ರೋಹ ಹೇಳಿಕೆ ಹಾಗೂ ರಾಜ್ಯಪಾಲರ ಬಗ್ಗೆ ಅವಹೇಳನಕಾರಿ
ಶಬ್ದಗಳನ್ನು ಬಳಸಿ ಮಾತನಾಡಿದ್ದು ಇದರ ವಿರುದ್ಧ ಬೆಳ್ತಂಗಡಿ ಯುವಮೋರ್ಚಾ ಪೊಲೀಸ್ ಠಾಣೆಗೆ ದೂರು ನೀಡಿದರೂ ಇಷ್ಟರವರೆಗೆ ಪ್ರಕರಣ ದಾಖಲಿಸಿಕೊಳ್ಳಲು ವಿಫಲರಾದ ಪೊಲೀಸರು ಹಾಗೂ ಒತ್ತಡ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ಮೂರು ಮಾರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ, ಮೂಡಾ ಸೇರಿದಂತೆ ಹಲವಾರೂ ಹಗರಣಗಳಲ್ಲಿ ಭಾಗಿಯಾಗುವ ಮೂಲಕ ಅತೀ ಭ್ರಷ್ಟ ಸರ್ಕಾರ ಎಂಬ ಹೆಗ್ಗಳಿಕೆಗೆ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಾತ್ರವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ , ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ನಾವೂರು, ಉಮೇಶ್ ಕುಲಾಲ್,ಸೀತಾರಾಮ್ ಬೆಳಾಲು, ಸೇರಿದಂತೆ ಬಿಜೆಪಿಯ ಇನ್ನಿತರ ಪ್ರಮುಖರು ಭಾಗವಹಿಸಿದರು. ಕೊನೆಯಲ್ಲಿ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಆರ್. ಧನ್ಯವಾದವಿತ್ತರು.