ಸಾಂದರ್ಭಿಕ ಚಿತ್ರ
ಉತ್ತರ ಪ್ರದೇಶ: ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಸಮಯ ನೋಡಿ ಕಾಮುಕನೋರ್ವ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಘಾಜಿಯಾಬಾದ್‌ನಲ್ಲಿ ನಡೆದಿದೆ.
ಸಂಜೆಯಾಗುತ್ತಿದ್ದ ವೇಳೆ ವಿದ್ಯುತ್ ಕಡಿತಗೊಂಡಿದ್ದು ಈ ಸಮಯಕ್ಕೆ ಹೊಂಚುಹಾಕಿದ್ದ ಸ್ಕಾçಪ್ ಡೀಲರ್ ವ್ಯಕ್ತಿಯೋರ್ವ 14 ವರ್ಷದ ಅಪ್ರಾಪ್ತ ಬಾಲಕಿ ಮನೆಗೆ ಹಿಂಬಾಗಿಲಿನಿಂದ ಪ್ರವೇಶಿಸಿ ಅತ್ಯಾಚಾರವೆಸಗಿದ್ದಾನೆ.
ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿರುವ ಪೊಲೀಸರು 3ರಿಂದ 4 ಜನ ಈ ಪ್ರಕರಣದಲ್ಲಿ ಭಾಗಿಯಾಗಿರವ ಸಾಧ್ಯತೆ ಇದೆ. ಆದರೆ ಮುಂದಿನ ತನಿಖೆಯ ನಂತರ ಪ್ರಮುಖ ಆರೋಪಿಯನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು, ಅಪರಾಧಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿದ್ದು ಆರೋಪಿ ಸ್ಕ್ರ‍್ಯಾಪ್ ಡೀಲರ್ ಅಂಗಡಿಗೆ ನುಗ್ಗಿ ಸರಕುಗಳನ್ನು ಎಸೆದಿದ್ದಾರೆ.