ದ.ಕ: ಗುಡುಗು ಸಹಿತ ಮಳೆಯ ಎಚ್ಚರಿಕೆ: ಸೆ.2ರವರೆಗೆ ಕರಾವಳಿಯಲ್ಲಿ ಮಳೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು 8 ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ ನೀಡಿದೆ.
ಬೆಳಗಾವಿ, ವಿಜಯಪುರ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಸೆಪ್ಟೆಂಬರ್ 2 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

error: Content is protected !!