ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ತನಿಖೆಯಲ್ಲಿದ್ದು ಇಂದು ಬೆಳಗ್ಗೆ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಸುಮಾರು 4 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಕಿಡ್ನಾಪ್ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಕೊಲೆ ನಂತ್ರ ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಆಗಿದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ಅವರ ರಕ್ತ ಇರುವುದು ಪತ್ತೆ ಆಗಿದೆ. ಇದರಿಂದ ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ ಬಗ್ಗೆ ಖಚಿತ ಮಾಹಿತಿ ಪಕ್ಕ ಆಗಿದೆ.
ಪ್ರಕರಣದಲ್ಲಿ ದರ್ಶನ್ ಎ1 ಆರೋಪಿಯಾಗುವ ಸಾಧ್ಯತೆಗಳು ಬಹಳಷ್ಟಿದೆ ಎಂಬ ಮಾಹಿತಿ ಇತ್ತಿಚೆಗೆ ಹರಿದಾಡಿತ್ತು. ಹೀಗಾಗಿ ಇಂದು ಪ್ರಮುಖ ಬೆಳವಣಿಗೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹಾಗಾಗಿಲ್ಲ. ಕೊಲೆ ಮಾಡಲು ಮೂಲ ಕಾರಣ ಪವಿತ್ರಾ ಗೌಡ ಆಗಿರುವುದರಿಂದ ಪವಿತ್ರಾ ಗೌಡ ಎ1 ಆಗಿದ್ದು, ನಟ ದರ್ಶನ್ ಎ2 ಆರೋಪಿಯಾಗಿ ಮುಂದುವರಿದಿದ್ದಾರೆ. ಎಸಿಪಿ ಚಂದನ್ ಕುಮಾರ್ ಹಾಗೂ ತನಿಖಾ ತಂಡ ದರ್ಶನ್ ಅವರನ್ನು ಎರಡನೇ ಆರೋಪಿ ಆಗಿ ಉಲ್ಲೇಖ ಮಾಡಿದೆ.
ಹಲ್ಲೆ ನಡೆಯುವ ಸ್ಥಳದಲ್ಲಿ ಪವಿತ್ರಾ ಗೌಡ ಅವರು ಇದ್ದಿದ್ದು, ಚಪ್ಪಲಿಯಲ್ಲಿ ಅವರು ಹೊಡೆದಿರುವುದು, ಕೃತ್ಯ ನಡೆದ ಸ್ಥಳದಲ್ಲಿ ಪವಿತ್ರ ಗೌಡ ಅವರ ಮೊಬೈಲ್ ಆಕ್ಟೀವ್ ಆಗಿರುವುದಕ್ಕೆ ಸಾಕ್ಷಿ ಸಿಕ್ಕಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿಯಾದ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. 3 ಪ್ರತ್ಯಕ್ಷ ಸಾಕ್ಷಿಗಳು, ಎಫ್‌ಎಸ್‌ಎಲ್ ಮಾತ್ತು ಸಿಎಫ್‌ಎಸ್‌ಎಲ್‌ನಿಂದ 8 ವರದಿಗಳು ಇವೆ. ಈ ಪ್ರಕರಣದಲ್ಲಿ ಒಟ್ಟೂ 231 ಸಾಕ್ಷಿಗಳು ಇದ್ದು, ಕೊಲೆ ಕೇಸ್‌ನಲ್ಲಿ ಇನ್ನೂ ತನಿಖೆ ಪೂರ್ಣಗೊಂಡಿಲ್ಲ. ಹೀಗಾಗಿ ಸಿಆರ್‌ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ವಿಶೇಷ ಕೋರ್ಟ್ಗೆ ಪೊಲೀಸರು ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ.