ಕರ್ನೋಡಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

ಲಾಯಿಲಾ: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಲಾಯಿಲ, ಹಳೆ ವಿದ್ಯಾರ್ಥಿ ಸಂಘ ಕರ್ನೋಡಿ ಇದರ ಆಶ್ರಯದಲ್ಲಿ ಸೆ.04ರಂದು ಕರ್ನೋಡಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ ನಡೆಯಿತು.

ಬಿ.ಕೆ ಧನಂಜಯ್ ರಾವ್ ಅವರು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಶಾಲೆಯಲ್ಲಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶಿಕ್ಷಕಿ ಲಲಿತ ಇವರನ್ನು ಸನ್ಮಾನಿಸಿ ಅವರ ಸೇವೆಯನ್ನು ಸ್ಮರಿಸಲಾಯಿತು. ಜೊತೆಗೆ ಶಾಲೆಯಲ್ಲಿ ಪ್ರಸ್ತುತ ಸೇವೆ ಗೈಯುತ್ತಿರುವ ಎಲ್ಲಾ ಶಿಕ್ಷಕರನ್ನು ಸಂಘದ ವತಿಯಿಂದ ಗೌರವಿಸಿಸಲಾಯಿತು. ಸಹ ಶಿಕ್ಷಕಿ ಗಂಗಾರಾಣಿ ಜೋಶಿ ಇವರು ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಮುಖ್ಯ ಶಿಕ್ಷಕರಾದ ಜಗನ್ನಾಥ.ಎಂ ಇವರನ್ನು ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.

ಸುರೇಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬಿ. ಎಲ್ ಸಂತೋಷ್ ಕುಮಾರ್, ಕಾರ್ಯದರ್ಶಿ ಗಣೇಶ್ ಆರ್, ಕೋಶಾಧಿಕಾರಿ ಸದಾಶಿವ ಕಕ್ಕೆನ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸೌಮ್ಯ, ಶಾಲಾ ಮಕ್ಕಳು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಣೇಶ್ ಆರ್ ಸ್ವಾಗತಿಸಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರುಕ್ಮಯ ಕನ್ನಾಜೆ ಧನ್ಯವಾದನಿತ್ತರು. ಸಹ ಶಿಕ್ಷಕ ಕೃಷ್ಣಕುಮಾರ್ ಕಾರ್ಯಕ್ರಮ ನಿರೂಪಿಸಿದರು.

error: Content is protected !!