ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಮುಂದಿನ 3 ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸೆ.13ವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಬಹುತೇಕ ಭಾಗದ ಜಿಲ್ಲೆಗಳಲ್ಲಿ ಮಳೆ ಇಳಿಮುಖವಾಗಿದೆ. ಆದರೂ, ಕೆಲ ಭಾಗಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವವಿದೆ.

ಕರಾವಳಿ ಭಾಗದಲ್ಲಿ ಪ್ರತಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಕೊಡಗಿನಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

error: Content is protected !!