ಮಂಗಳೂರು: ಕಿನ್ನಿಗೋಳಿಯ ರಾಮನಗರದಲ್ಲಿ ಸಂಭವಿಸಿದ ರಿಕ್ಷಾ ಅಪಘಾತದಲ್ಲಿ ತನ್ನ ತಾಯಿಯನ್ನು ಅಪಾಯದಿಂದ ಪಾರು ಮಾಡಿದ 7ನೇ ತರಗತಿ ಬಾಲಕಿ ವೈಭವಿ ಅವರ ಸಮಯಪ್ರಜ್ಞೆಗೆ ಭಾರೀ ಶ್ಲಾಘನೆ ವ್ಯಕ್ತವಾಗಿದ್ದು ಪೊಲೀಸ್ ಆಯುಕ್ತರು ಸನ್ಮಾನಿಸಿದ್ದಾರೆ.
ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ತಮ್ಮ ಕಚೇರಿಗೆ ಬಾಲಕಿಯನ್ನು ಕರೆಸಿ ಸನ್ಮಾನಿಸಿ ಆಕೆಯ ಧೈರ್ಯವನ್ನು ಶ್ಲಾಘಿಸಿ “ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ” ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯೆಲ್, ದಿನೇಶ್ ಕುಮಾರ್ ಬಿ.ಪಿ., ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಸಂಚಾರ ವಿಭಾಗದ ಇನ್‌ಸ್ಪೆಕ್ಟರ್‌ಗಳಾದ ಶರೀಫ್, ಹುಲುಗಪ್ಪ ಮತ್ತು ವೈಭವಿ ಪಾಲಕರು ಉಪಸ್ಥಿತರಿದ್ದರು.